ADVERTISEMENT

ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿದಾಗ ಮಾತ್ರ ಕ್ಷೇತ್ರದ ಅಭಿವೃದ್ದಿ ಸಾಧ್ಯ: ಶಾಸಕ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 13:35 IST
Last Updated 1 ಆಗಸ್ಟ್ 2024, 13:35 IST
ಅರಸೀಕೆರೆ ತಾಲ್ಲೂಕಿನ ಬಿ.ದೊಡ್ಡೇನಹಳ್ಳಿ ಗ್ರಾಮದಲ್ಲಿ ಇತ್ತಿಚ್ಚೀಗೆ ನೂತನ ಶಾಲಾ ಕೊಠಡಿಯನ್ನು ಗೃಹಮಂಡಳಿ ಅಧ್ಯಕ್ಷ ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿ ಮಾತನಾಡಿದರು.
ಅರಸೀಕೆರೆ ತಾಲ್ಲೂಕಿನ ಬಿ.ದೊಡ್ಡೇನಹಳ್ಳಿ ಗ್ರಾಮದಲ್ಲಿ ಇತ್ತಿಚ್ಚೀಗೆ ನೂತನ ಶಾಲಾ ಕೊಠಡಿಯನ್ನು ಗೃಹಮಂಡಳಿ ಅಧ್ಯಕ್ಷ ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿ ಮಾತನಾಡಿದರು.   

ಅರಸೀಕೆರೆ: ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿದಾಗ ಮಾತ್ರ ಕ್ಷೇತ್ರದ ಅಭಿವೃದ್ದಿ ಸಾಧ್ಯ ಎಂದು ಮನಗೊಂಡು ತಾಲ್ಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ತಾಲ್ಲೂಕಿನ ಬಿ.ದೊಡ್ಡೇನಹಳ್ಳಿ ಗ್ರಾಮದಲ್ಲಿ ಇತ್ತಿಚ್ಚೀಗೆ ನೂತನ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.

ನನ್ನ ಕ್ಷೇತ್ರದಲ್ಲಿ ಬಡಮಕ್ಕಳಿಗೂ ಗುಣಮಟ್ಟದ ಉಚಿತ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದಲೇ ಮೊರಾರ್ಜಿ ವಸತಿ ಶಾಲೆಗಳು, ಅಲ್ಪಸಂಖ್ಯಾತರ ವಸತಿ ಶಾಲೆಗಳು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳನ್ನು ಸುಂದರ ಪರಿಸರದಲ್ಲಿ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣವಿರುವಂತಹ ಪ್ರದೇಶದಲ್ಲಿ ಸ್ಥಾಪಿಸಿದ್ದೇವೆ.ಇದರಿಂದ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುತ್ತಿರುವುದು ನಮಗೆ ಸಂತಸವನ್ನುಂಟು ಮಾಡಿದೆ.

ADVERTISEMENT

ಕ್ಷೇತ್ರದ ಮತದಾರರು ತಮ್ಮ ಮೇಲೆ ವಿಶ್ವಾಸವಿಟ್ಟು ಸತತವಾಗಿ 4 ಬಾರಿ ಆಯ್ಕೆಮಾಡಿದ್ದಾರೆ. ಅವರ ವಿಶ್ವಾಸಕ್ಕೆ ದಕ್ಕೆ ಬಾರದ ರೀತಿಯಲ್ಲಿ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ಯುವುದು ತಮ್ಮ ಕರ್ತವ್ಯ ಎಂದರು.

ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಬಿಳಿ ಚೌಡಯ್ಯ ಮಾತನಾಡಿ ಕ್ಷೇತ್ರದ ಎಲ್ಲ ಸಮಾಜದವರ ಅಭಿವೃದ್ದಿಗಾಗಿ ತಮ್ಮದೇ ಆದ ಕಾರ್ಯವೈಖರಿಯ ಮೂಲಕ ಅನುದಾನಗಳು ಹಾಗೂ ವಿವಿಧ ಯೋಜನೆಗಳ ಮೂಲಕ ನಗರ ಮತ್ತು ಗ್ರಾಮೀಣ ಭಾಗದ ಏಳಿಗೆಗಾಗಿ ಶ್ರಮಿಸಿ ಇನ್ನಿತರ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು. ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು,ಸದಸ್ಯರು, ಗ್ರಾಮಸ್ಥರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.