ADVERTISEMENT

ಹಾಸನ: 327 ಮಂದಿಗೆ ಕೊರೊನಾ ಸೋಂಕು

ಐವರ ಸಾವು, 128 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 14:37 IST
Last Updated 28 ಸೆಪ್ಟೆಂಬರ್ 2020, 14:37 IST

ಹಾಸನ: ಕೊರೊನಾ ಸೋಂಕಿತರಲ್ಲಿ ಮತ್ತೆ ಐವರು ಮೃತಪಟ್ಟಿರುವುದು ಸೋಮವಾರ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 311ಕ್ಕೆ ಏರಿಕೆಯಾಗಿದೆ.

ಹೊಸದಾಗಿ 327 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 15,872ಕ್ಕೆಏರಿಕೆಯಾಗಿದೆ. ಶೀತ ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆಯಿಂದ ಕೋವಿಡ್‌ ಆಸ್ಪತ್ರೆಗೆದಾಖಲಾಗಿದ್ದ ಹಾಸನ ತಾಲ್ಲೂಕಿನ ಇಬ್ಬರು, ಅರಸೀಕೆರೆ, ಬೇಲೂರು ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸಲಿಲ್ಲ.

2,934 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಹೋಂಐಸೋಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಣಮುಖರಾದ 128 ಜನ ಸೇರಿ ಈವರೆಗೆ 12,627 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 52 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಹೊಸದಾಗಿ ಅರಸೀಕೆರೆ 39, ಚನ್ನರಾಯಪಟ್ಟಣ 51, ಆಲೂರು 11, ಹಾಸನ 93, ಹೊಳೆನರಸೀಪುರ 32, ಅರಕಲಗೂಡು 58, ಬೇಲೂರು 26, ಸಕಲೇಶಪುರ 14 ಹಾಗೂ ಹೊರ ಜಿಲ್ಲೆಯ ಮೂವರಿಗೆ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.