ADVERTISEMENT

ಕೋವಿಡ್‌: ಜಿಲ್ಲೆಯಲ್ಲಿ 3 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 5:29 IST
Last Updated 15 ಏಪ್ರಿಲ್ 2021, 5:29 IST

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ ಒಟ್ಟು 485 ಮಂದಿ ರೋಗದಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 147 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 30,983 ಏರಿಕೆಯಾಗಿದೆ.

ಜಿಲ್ಲೆಯಲ್ಲಿ 1,149 ಸಕ್ರಿಯ ಪ್ರಕರಣಗಳ ಪೈಕಿ, 12 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಬಿಡುಗಡೆಯಾದ 104 ಮಂದಿ ಸೇರಿದಂತೆ ಈವರೆಗೆ 29,349 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ADVERTISEMENT

ಹಾಸನ ತಾಲ್ಲೂಕಿನ 68 ಮಂದಿ, ಅರಸೀಕೆರೆ 12, ಚನ್ನರಾಯಪಟ್ಟಣ 30, ಬೇಲೂರು 7, ಹೊಳೆನರಸೀಪುರ 4, ಆಲೂರು 1, ಸಕಲೇಶಪುರ 3, ಅರಕಲಗೂಡು 21 ಹಾಗೂ ಇತರೆ ಜಿಲ್ಲೆಯ 1 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.