ADVERTISEMENT

ಕೋವಿಡ್‌: 196 ಜನ ಗುಣಮುಖ

ಮತ್ತೆ 2 ಜನ ಸಾವು, 340 ಜನರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 15:01 IST
Last Updated 4 ಸೆಪ್ಟೆಂಬರ್ 2020, 15:01 IST

ಹಾಸನ: ಜಿಲ್ಲೆಯಲ್ಲಿ ಶುಕ್ರವಾರ 340 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 9366ಕ್ಕೆ ಏರಿಕೆಯಾಗಿದೆ. ಇಬ್ಬರ ಸಾವಿನೊಂದಿಗೆ ಮೃತರ ಸಂಖ್ಯೆ 211 ತಲುಪಿದೆ.

3043 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್‌ ಕೇರ್‌ ಸೆಂಟರ್‌, ಜಿಲ್ಲಾ ಕೋವಿಡ್‌ ಆಸ್ಪತ್ರೆ ಹಾಗೂ ಹೋಂ
ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಡುಗಡೆಯಾದ 196 ಜನ ಸೇರಿದಂತೆ ಈವರೆಗೆ 6112 ಮಂದಿ
ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಅರಸೀಕೆರೆ ತಾಲ್ಲೂಕಿನ 11, ಚನ್ನರಾಯಪಟ್ಟಣ 50, ಆಲೂರು 8, ಹಾಸನ 129, ಹೊಳೆನರಸೀಪುರ 32, ಅರಕಲಗೂಡು 43, ಬೇಲೂರು 19, ಸಕಲೇಶಪುರ 14 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶೀತ ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಾಸನ ಮತ್ತು ಚನ್ನರಾಯಪಟ್ಟಣದ ತಲಾ ಇಬ್ಬರು ಚಿಕಿತ್ಸೆಗೆ ಸಂದಿಸಲಿಲ್ಲ. ನಿಯಮ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ನಿತ್ಯ ಎರಡು ಸಾವಿರ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಲಕ್ಷಣಗಳು ಕಂಡು ಬಂದರೆ ಸಮೀಪದ ಸಾರ್ವಜನಿಕ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು. ಸಾರ್ವಜನಿಕರು ಕಡ್ಡಾಯವಾಗಿ ಅಂತರ ಪಾಲನೆ ಮಾಡಬೇಕು. ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಬೇಕು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.