ADVERTISEMENT

ಬೇಲೂರು ಶಾಸಕ ಲಿಂಗೇಶ್‌ಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 11:56 IST
Last Updated 26 ಆಗಸ್ಟ್ 2020, 11:56 IST
ಕೆ.ಎಸ್. ಲಿಂಗೇಶ್
ಕೆ.ಎಸ್. ಲಿಂಗೇಶ್   

ಹಾಸನ: ಬೇಲೂರು ಜೆಡಿಎಸ್ ಶಾಸಕ ಕೆ.ಎಸ್. ಲಿಂಗೇಶ್ ಅವರಿಗೆ ಕೋವಿಡ್‌ ದೃಢಪಟ್ಟಿರುವುದರಿಂದ ಬೆಂಗಳೂರಿನ
ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗದ ಲಕ್ಷಣಗಳು ಇಲ್ಲದಿದ್ದರೂ ತಪಾಸಣೆಗೆ ಒಳಗಾಗಿದ್ದರು. ರ‍್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ನಲ್ಲಿ ಕೊರೊನಾ ಪಾಸಿಟಿವ್‌ ಬಂದಿದೆ.

‘ಒಂದು ವಾರ ಚಿಕಿತ್ಸೆ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಶೀಘ್ರ ಗುಣಮುಖನಾಗಿ ಬರುವೆ. ಪ್ರಾಥಮಿಕ ಸಂಪರ್ಕಿತರು
ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕುಟುಂಬದ ಸದಸ್ಯರು ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. ಯಾವುದೇ ಸಮಸ್ಯೆ, ಕೆಲಸ ಇದ್ದರೂ ಮೊಬೈಲ್‌ ಮೂಲಕ ಸಂಪರ್ಕಿಸಿದರೆ ಸ್ಪಂದಿಸುತ್ತೇನೆ’ ಎಂದು ವಿಡಿಯೊ ಮೂಲಕ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.