ಹಾಸನ: ಜಿಲ್ಲೆಯಲ್ಲಿ ವಾರದಿಂದ ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿರುವುದು ಕೊಂಚ ನಿರಾಳತೆ ತಂದಿದೆ. ಗುರುವಾರ 96 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 23,800ಕ್ಕೆ ಏರಿಕೆಯಾಗಿದೆ.
ನಿತ್ಯ 500ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗುತ್ತಿತ್ತು. ಆದರೆ ಎರಡು, ಮೂರು ದಿನಗಳಿಂದ ಸೋಂಕು ಪ್ರಕರಣಗಳು ಇಳಿಕೆಯಾಗಿದೆ. ಸೋಂಕಿನಿಂದ ಮತ್ತೆ 5 ಮಂದಿ ಸಾವಿಗೀಡಾಗಿದ್ದು, ಸಾವಿನ ಪ್ರಮಾಣ 409ಕ್ಕೆ ಹೆಚ್ಚಳವಾಗಿದೆ.
2,141 ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ ಹಾಗೂ ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಬಿಡುಗಡೆಯಾದ 268 ಜನ ಸೇರಿದಂತೆ ಈವರೆಗೆ 21,250 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 41 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸದಾಗಿ ಚನ್ನರಾಯಪಟ್ಟಣ 4, ಆಲೂರು 7, ಹಾಸನ 54, ಹೊಳೆನರಸೀಪುರ 6, ಅರಕಲಗೂಡು 15, ಬೇಲೂರು 7, ಸಕಲೇಶಪುರ 2 ಹಾಗೂ ಇತರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.