ADVERTISEMENT

ಕೋವಿಡ್‌ಗೆ ಮತ್ತೆ 5 ಜನ ಸಾವು

9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 14:59 IST
Last Updated 3 ಸೆಪ್ಟೆಂಬರ್ 2020, 14:59 IST

ಹಾಸನ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 250 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದ ಐದು ಮಂದಿ ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ 9,026ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,901 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಸೆಂಟರ್‌ ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಡುಗಡೆಯಾದ 190 ಜನ ಸೇರಿ ಈವರೆಗೆ 5916 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಅರಸೀಕೆರೆ 8, ಚನ್ನರಾಯಪಟ್ಟಣ 28, ಆಲೂರು 9, ಹಾಸನ 137, ಹೊಳೆನರಸೀಪುರ 13, ಅರಕಲಗೂಡು 29, ಬೇಲೂರು 11, ಸಕಲೇಶಪುರ 14 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.