ಹಾಸನ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ಶ್ವೇತಾ ದೇವರಾಜ್ ಅವರಿಗೆ ಕೋವಿಡ್ ದೃಢಪಟ್ಟಿದೆ.
ಎರಡು ದಿನಗಳ ಹಿಂದೆ ತಲೆ ನೋವು ಬಂದ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿದ್ದರು. ವೈದ್ಯರ
ಸಲಹೆಯಂತೆ ಹೋಂ ಐಸೋಲೆಷನ್‌ನಲ್ಲಿದ್ದಾರೆ.
‘ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಯಾರೂ ಆತಂಕ ಪಡುವ ಅಗತ್ಯ ಇಲ್ಲ. ಪ್ರಾಥಮಿಕ ಸಂಪರ್ಕ
ಹೊಂದಿದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.