ADVERTISEMENT

ಹಾಸನ: ದೇಶದ 50 ಕೋಟಿ ಜನರಿಗೆ ಕೋವಿಡ್‌ ಲಸಿಕೆ

ನಗರ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ಪ್ರೀತಂ ಗೌಡ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 14:36 IST
Last Updated 19 ಜುಲೈ 2021, 14:36 IST
ಹಾಸನದಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ನಗರ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ‌
ಹಾಸನದಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ನಗರ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ‌   

ಹಾಸನ: ದೇಶದ 130 ಕೋಟಿ ಜನಸಂಖ್ಯೆ ಪೈಕಿ ಈವರೆಗೆ 50 ಕೋಟಿ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.

ನಗರದ ಗುರುರಾಜ ಕಲ್ಯಾಣಮಂಟಪದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕಾರಿಣಿಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜುಲೈ 18ರವರೆಗೆ ಶೇಕಡಾ 38ರಷ್ಟು ಜನರಿಗೆಮೊದಲ ಡೋಸ್‌ ನೀಡಿರುವುದು ಹೆಮ್ಮೆಯ ವಿಚಾರ. ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ. ಸಕಾರಾತ್ಮಕ ವಿಚಾರಗಳನ್ನು ಜನರಿಗೆ ತಿಳಿಸುವ ಕೆಲಸ ವಾಗಬೇಕು ಎಂದು ತಿಳಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಕೇರಳ ಮತ್ತುಮುಂಬೈ ರಾಜ್ಯಗಳು ಕೋವಿಡ್‌ ನಿಯಂತ್ರಣಕ್ಕೆ ತಿಣುಕಾಡುತ್ತಿವೆ. ಆದರೆ, ರಾಜ್ಯ ಸರ್ಕಾರಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡ ಕಾರ್ಯಕ್ರಮಗಳು ಮಾದರಿಯಾಗಿವೆ. ಕೋವಿಡ್‌ನಿಂದಮೃತಪಟ್ಟ ಬಿಪಿಎಲ್ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿದೆ ಎಂದರು.

ADVERTISEMENT

ಮುಂದಿನ ವಿಧಾನಸಭೆ ಚುನಾವಣೆ 2023ಕ್ಕೆ ನಡೆಯಲಿದೆ. ಅಲ್ಲಿಯವರೆಗೂ ಕಾಯದೆಈಗಿನಿಂದಲೇ ಬೂತ್‌ ಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು. ಕೇವಲ ಚುನಾವಣೆಗೆ ಯೋಚನೆಮಾಡದೇ ಸಂಘಟನೆಗೆ ಆದ್ಯತೆ ನೀಡಬೇಕು. ಕೋವಿಡ್‌ ಸಂದರ್ಭದಲ್ಲೂ ನಗರ ಬಿಜೆಪಿ ಮಂಡಲುಉತ್ತಮ ಕಾರ್ಯ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚುನಾವಣೆ ಬಂದಾಗ ಮತ ಕೇಳುವುದು ಒಂದು ಭಾಗ. ಸೇವಾ ಸಂಘಟನೆ ಪಕ್ಷದ ಆಧಾರ ಸ್ತಂಭ.ಇದನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷ ಮೋಹನ್‌ ಕುಮಾರ್‌, ಹುಡಾ ಅಧ್ಯಕ್ಷ ಲಲಟಾ ಮೂರ್ತಿ, ನಗರ ಮಂಡಲಅಧ್ಯಕ್ಷ ವೇಣುಗೋಪಾಲ್‌, ಪ್ರಧಾನ ಕಾರ್ಯದರ್ಶಿ ವಿಜಯ್‌ ಹಾಜರಿದ್ದರು. ವೇದಾವತಿಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.