ADVERTISEMENT

ಹಾಸನ: ಕೋವಿಡ್‌ ಪ್ರಕರಣ ಇಳಿಕೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 14:12 IST
Last Updated 8 ನವೆಂಬರ್ 2020, 14:12 IST

ಹಾಸನ: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಜತೆಗೆ ತೀವ್ರ ನಿಗಾ ಘಟಕಕ್ಕೆ ದಾಖಲಾಗುತ್ತಿರುವವರ ಸಂಖ್ಯೆಯೂ ಕಡಿಮೆ ಆಗುತ್ತಿರುವುದು ಸಮಾಧಾನ ತಂದಿದೆ.

ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 86 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 25878ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಹಾಸನ ತಾಲ್ಲೂಕಿನ ಇಬ್ಬರು ಮೃತಪಟ್ಟಿದ್ದಾರೆ. ಈ ವರೆಗೆ 436 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

997 ಸೋಂಕಿತರು ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರ, ಹೋಂ ಐಸೋಲೇಷನ್‌ ನಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 26 ಮಂದಿ ದಾಖಲಾಗಿದ್ದಾರೆ. ಭಾನುವಾರ ಬಿಡುಗಡೆಯಾದ 110 ಮಂದಿ ಸೇರಿದಂತೆ ಈವರೆಗೆ 24445 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಹೊಸದಾಗಿ ಆಲೂರು 7, ಅರಕಲಗೂಡು 12, ಅರಸೀಕೆರೆ 8, ಬೇಲೂರು 9, ಚನ್ನರಾಯಪಟ್ಟಣ 5, ಹಾಸನ 26,
ಹೊಳೆನರಸೀಪುರ 9, ಸಕಲೇಶಪುರ 10 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.