ಕೊಣನೂರು: ಶಿವರಾತ್ರಿಯ ಅಂಗವಾಗಿ ಮಂಜುನಾಥಸ್ವಾಮಿ ದರ್ಶನಕ್ಕೆ ಪಾದಯಾತ್ರೆಯಲ್ಲಿ ಹೊರಟಿದ್ದ ಯುವಕ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಬ್ರಿಡ್ಜ್ ಬಳಿ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ರಾಮನಾಥಪುರ ಹೋಬಳಿಯ ಕೇರಳಾಪುರದ ಸಾಲೇಶ್ವರ ಕಲ್ಯಾಣ ಮಂಟಪದ ಸಮೀಪದ ವಾಸಿ ರವಿ (28) ಮೃತಪಟ್ಟವರು.
ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಮಯದಲ್ಲಿ ನದಿಯಲ್ಲಿ ತನ್ನ ಸ್ನೇಹಿತರ ಜೊತೆಯಲ್ಲಿ ಸ್ನಾನ ಮಾಡುವಾಗ ನೀರಿನ ಆಳ ತಿಳಿಯದೆಮುಳುಗಿದ್ದಾರೆ.
ಭಾನುವಾರ ಬೆಳಿಗ್ಗೆ ಕೇರಳಾಪುರದಿಂದ ಪಾದಯಾತ್ರೆ ಹೊರಟ ತಂಡದಲ್ಲಿ ರವಿ ಇದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.