ಹೊಳೆನರಸೀಪುರ: ತಾಲ್ಲೂಕಿನ ಜೋಡಿಗುಬ್ಬಿಯ ರೈತ ರವಿಕುಮಾರ (48) ಸಾಲಬಾಧೆ ತಾಳಲಾರದೇ ಜಮೀನಿನ ಬಳಿ ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ಕೃಷಿ ಚಟುವಟಿಕೆಗಾಗಿ ₹ 5.75 ಲಕ್ಷ ಸಾಲ ಮಾಡಿಕೊಂಡಿದ್ದು, ಜೋಳ, ಶುಂಠಿ, ರಾಗಿ ಬೆಳೆಯಿಂದ ಸಾಲ ತೀರಿಸಲು ಸಾಧ್ಯವಾಗದ ಕಾರಣ ಮಂಗಳವಾರ ಸಂಜೆ ಜಮೀನಿನ ಬಳಿ ಶುಂಠಿ ಬೆಳೆಗೆ ಸಿಂಪಡಿಸುವ ಕಳೆನಾಶಕ ಸೇವಿಸಿ ಒದ್ದಾಡುವುದನ್ನು ಕಂಡ ಗ್ರಾಮಸ್ಥರು ಮನೆಗೆ ವಿಷಯ ತಿಳಿಸಿ, ಆಸ್ಪತ್ರೆಗೆ ಕರೆತರುವ ವೇಳೆಗೆ ಮಾರ್ಗದಲ್ಲೇ ಮೃತಪಟ್ಟಿದ್ದಾರೆ.
ಅವರಿಗೆ ತಾಯಿ, ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.