ADVERTISEMENT

ಹಾಸನ: ಸಾಲಬಾಧೆ ತಾಳದೇ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 5:36 IST
Last Updated 15 ಆಗಸ್ಟ್ 2024, 5:36 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಹಾಸನ: ಸಾಲಬಾಧೆ ತಾಳಲಾರದೆ ಚನ್ನರಾಯಪಟ್ಟಣದ, ಕೆರೆಬೀದಿಯ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಶ್ರೀನಿವಾಸ್ (43) ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು, ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶ್ರೀನಿವಾಸ್ ಕಾರು ಚಾಲಕರಾಗಿದ್ದು, ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ವಿವಿಧೆಡೆ ಸಾಲ ಪಡೆದಿದ್ದ ಶ್ರೀನಿವಾಸ್ ಅದನ್ನು ಮರುಪಾವತಿಸಲಾಗದೆ ಪರಿತಪಿಸುತ್ತಿದ್ದರು.

ಕಳೆದ ಮಂಗಳವಾರದಿಂದ ಕಾಣೆಯಾಗಿದ್ದ ಈ ಮೂವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಅವರ ಸುಳಿವು ದೊರೆಯದಿದ್ದಾಗ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಬುಧವಾರ ಸಂಜೆ ಬಾಗೂರು ಹೋಬಳಿ ಮುದ್ದಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿವೆ. ಶವಗಳನ್ನು ಹೊರ ತೆಗೆದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು, ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.