
ಹಾಸನ: ದೆಹಲಿಯಲ್ಲಿ ಕಾರಿನಲ್ಲಿ ಬಾಂಬ್ ಸ್ಫೋಟಗೊಂಡ ಹಿನ್ನೆಯಲ್ಲಿ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ನಗರದ ರೈಲ್ವೆ ನಿಲ್ದಾಣದ ಕಾರ್, ಬೈಕ್ ಪಾರ್ಕಿಂಗ್ ಪ್ರದೇಶದಲ್ಲಿ ಬಳಿ ರೈಲ್ವೆ ಪೊಲೀಸರಿಂದ ತಪಾಸಣೆ ನಡೆಸಿದರು. ಮೆಟಲ್ ಡಿಟೆಕ್ಟರ್ ಹಿಡಿದು ಎಲ್ಲೆಡೆ ಪರಿಶೀಲನೆ ನಡೆಸಲಾಯಿತು. ರೈಲ್ವೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಬ್ಯಾಗ್ ಹಾಗೂ ನಿಲ್ದಾಣ ವ್ಯಾಪ್ತಿಯಲ್ಲಿರುವ ಕಸದ ತೊಟ್ಟಿಗಳಲ್ಲೂ ಪೊಲೀಸರು ಶೋಧ ನಡೆಸಿದರು.
ಇನ್ನೊಂದೆಡೆ ಚನ್ನಪಟ್ಟದ ಕೇಂದ್ರ ಬಸ್ ನಿಲ್ದಾಣದಲ್ಲಿ ಶ್ವಾನದಳದೊಂದಿಗೆ ತಪಾಸಣೆ ನಡೆಸಲಾಯಿತು. ಕೇಂದ್ರ ಸರ್ಕಾರದ ಸೂಚನೆ ಮೇಲೆ ಜನನಿಬಿಡ ಪ್ರದೇಶದಲ್ಲಿ ಹೈ ಅಲರ್ಟ್ ಮಾಡಲಾಗಿದೆ.
ಬೇಲೂರಿನ ಐತಿಹಾಸಿಕ ಚನ್ನಕೇಶವ ದೇವಾಲಯ, ಗೊರೂರು ಹೇಮಾವತಿ ಜಲಾಶಯ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.