ADVERTISEMENT

ಇಂಧನ, ಅಗತ್ಯ ವಸ್ತು ಬೆಲೆ ಇಳಿಕೆಗೆ ಆಗ್ರಹ

ಹೇಮಾವತಿ ಪ್ರತಿಮೆ ಎದುರು ಸಿಪಿಎಂ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 14:18 IST
Last Updated 25 ಜೂನ್ 2021, 14:18 IST
ಹಾಸನದ ಹೇಮಾವತಿ ಪ್ರತಿಮೆ ಬಳಿ ಸಿಪಿಎಂ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಹಾಸನದ ಹೇಮಾವತಿ ಪ್ರತಿಮೆ ಬಳಿ ಸಿಪಿಎಂ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಹಾಸನ: ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಎಂ ವತಿಯಿಂದ ಶುಕ್ರವಾರ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಒಂದೂವರೆ ವರ್ಷದಿಂದ ದೇಶದ ಜನತೆ ಕೋವಿಡ್‌ನಿಂದಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಸಮಸ್ಯೆನಿವಾರಣೆಗೆ ಕ್ರಮ ವಹಿಸುವ ಬದಲು ಕೇಂದ್ರ ಸರ್ಕಾರ ಬೆಲೆ ಏರಿಕೆಯ ಹೊರೆ ಹೇರಿದೆ ಎಂದುಪ್ರತಿಭಟನಕಾರರು ಆರೋಪಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಮಾತನಾಡಿ, ಒಂದು ವರ್ಷದ ಅವಧಿಯಲ್ಲಿ ಪೆಟ್ರೋಲ್‌ಬೆಲೆ ₹25 ಹೆಚ್ಚಳಗೊಂಡಿದೆ. ಒಂದು ತಿಂಗಳಲ್ಲಿ 16 ಬಾರಿ ಬೆಲೆ ಏರಿಸಲಾಗಿದೆ. ಲೀಟರ್‌ಪೆಟ್ರೋಲ್‌ ದರ ₹ 100 ದಾಟಿದೆ. ಜನ ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಹೇಳಿದರು.

ADVERTISEMENT

ಇಂಧನ ಬೆಲೆ ಹೆಚ್ಚಳದಿಂದಾಗಿ ಅಗತ್ಯ ವಸ್ತುಗಳ ಬೆಲೆ ಸಹ ಏರಿಕೆ ಆಗಿದೆ. ಜಾಗತಿಕವಾಗಿ ಕಚ್ಛಾತೈಲದಲ್ಲಿ ಯಾವುದೇ ಬೆಲೆ ಏರಿಕೆ ಆಗದಿದ್ದರೂ ದೇಶದಲ್ಲಿ ಈ ಪ್ರಮಾಣದಲ್ಲಿ ದರ ಹೆಚ್ಚಲು ಕೇಂದ್ರಸರ್ಕಾರವೇ ನೇರ ಹೊಣೆ. ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದುಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್.ನವೀನ್ ಕುಮಾರ್,ಮುಖಂಡರಾದ ವಸಂತ್ ಕುಮಾರ, ಎಂ.ಜಿ. ಪೃಥ್ವಿ, ಎಂ.ಬಿ.ಪುಷ್ಪ, ಬಾನುಗೊಂದಿ ಲಿಂಗರಾಜುಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.