ADVERTISEMENT

ಬಾಂಗ್ಲಾ ಅಕ್ರಮ ವಲಸಿಗರನ್ನು ವಾಪಸ್ ಕಳುಹಿಸಲು ಆಗ್ರಹ: ವಿಶ್ವಹಿಂದೂ ಪರಿಷತ್‌

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 4:44 IST
Last Updated 1 ಜನವರಿ 2026, 4:44 IST
   

ಚನ್ನರಾಯಪಟ್ಟಣ: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡನಾರ್ಹ ಎಂದು ವಿಶ್ವಹಿಂದೂ ಪರಿಷತ್‌ ಹಾಸನ ವಿಭಾಗದ ಕಾರ್ಯದರ್ಶಿ ಬಿ.ಕೆ. ಮಹಿಪಾಲ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘1971ರಲ್ಲಿ ಬಾಂಗ್ಲಾ ದೇಶದ ಉದಯಕ್ಕೆ ಭಾರತದ ಕೊಡುಗೆ ಅಪಾರವಾದುದು. ಭಾರತ ನೀಡಿದ ಸಹಕಾರವನ್ನು ಬಾಂಗ್ಲಾ ಎಂದಿಗೂ ಮರೆಯುವಂತ್ತಿಲ್ಲ. ಆದರೆ ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಅಲ್ಲಿನ ಸರ್ಕಾರ ಇದಕ್ಕೆ ಕುಮ್ಮಕ್ಕು ನೀಡುತ್ತಿದೆ. ಬಾಂಗ್ಲಾ ದೇಶದಲ್ಲಿ ಶೇ 8ರಷ್ಟಿರುವ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಣೆ ಮಾಡಬೇಕು’ ಎಂದರು.

‘ಭಾರತದಲ್ಲಿ 5 ಕೋಟಿ ಬಾಂಗ್ಲಾ ಅಕ್ರಮ ವಲಸಿಗರು ನೆಲೆಸಿದ್ದಾರೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಕೇರಳ, ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿರುವ ಬಾಂಗ್ಲಾ ಅಕ್ರಮ ವಲಸಿಗರನ್ನು ಗುರುತಿಸಿ ಕೂಡಲೇ ವಾಪಸ್ ಕಳುಹಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಬಾಂಗ್ಲಾ ದೇಶದ ಅಕ್ರಮ ವಲಸಿಗರನ್ನು ಕರ್ನಾಟಕದಿಂದ ಹೊರಹಾಕಲು ಒತ್ತಾಯಿಸಲು ಜ.2ರಂದು ಸ್ವಯಂಪ್ರೇರಿತ ಚನ್ನರಾಯಪಟ್ಟಣ ಬಂದ್‍ಗೆ ಕರೆ ನೀಡಲಾಗಿದೆ. ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿದ ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು. ಇದಕ್ಕೆ ಹಿಂದೂಪರ ಸಂಘಟನೆಗಳು, ಕನ್ನಡಪರ ಹಾಗೂ ದಲಿತಪರ ಸಂಘಟನೆಗಳು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್, ಮುಖಂಡರಾದ ಜಯರಾಂ, ಆನಂದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.