ADVERTISEMENT

ಕಟ್ಟಡ ಉದ್ಯಮ ರಕ್ಷಿಸಲು ಆಗ್ರಹ

ಕಾರ್ಮಿಕ ಕಲ್ಯಾಣ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 16:31 IST
Last Updated 2 ಡಿಸೆಂಬರ್ 2021, 16:31 IST
ಹಾಸನ ನಗರದ ಕಾರ್ಮಿಕ ಇಲಾಖೆ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಹಾಸನ ನಗರದ ಕಾರ್ಮಿಕ ಇಲಾಖೆ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಹಾಸನ: ಕಾರ್ಮಿಕ ಮಂಡಳಿ ಘೋಷಿಸಿದ ಎಲ್ಲಾ ಸೌಲಭ್ಯಗಳು ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಕಾರ್ಮಿಕ ಇಲಾಖೆ ಕಚೇರಿ ಎದುರು ಕಾರ್ಮಿಕರುಗುರುವಾರ ಪ್ರತಿಭಟನೆ ನಡೆಸಲಾಯಿತು.

ಬಾಕಿ ಇರುವ ಸಾವಿರಾರು ಅರ್ಜಿಗಳು ಕೂಡಲೇ ಇತ್ಯರ್ಥಗೊಳಿಸಲು ಈಗಾಗಲೇ ನಡೆದಿರುವಸಭೆಗಳ ನಡಾವಳಿಗಳನ್ನು ಜಾರಿಗೊಳಿಸಬೇಕು. ಸರ್ಕಾರ ನಡೆಸಿದ ಸಭೆಗಳಲ್ಲಿ ಹಲವುಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ, ಆದರೆ, ಇದಾದಸುಮಾರು 2 ತಿಂಗಳ ಬಳಿಕವೂ ಹಲವು ಸಮಸ್ಯೆಗಳು ಇನ್ನೂ ಪರಿಹಾರ ಕಂಡಿಲ್ಲ ಎಂದುಆರೋಪಿಸಿದರು.

ಕಟ್ಟಡ ಉದ್ಯಮವನ್ನು ರಕ್ಷಿಸಬೇಕು, ದೇಶದಾದ್ಯಾಂತ ಕಾನೂನು ಬದ್ಧವಾಗಿ ರಚನೆಯಾಗಿರುವಕಲ್ಯಾಣ ಮಂಡಳಿ ಉಳಿಯಬೇಕು. ನಿರಂತರವಾಗಿ ಏರಿಕೆ ಯಾಗುತ್ತಿರುವ ಕಟ್ಟಡ ಸಾಮಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು. ಕಟ್ಟಡ ಸಾಮಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿಎಸ್‌ಟಿ ಕಡಿತಗೊಳಿಸಬೇಕು. ಲಾಕ್‍ಡೌನ್ ನಗದು ಪರಿಹಾರ ಪಾವತಿ ₹3 ಸಾವಿರ ಎಲ್ಲರಿಗೂ ಸಿಗುವವ್ಯವಸ್ಥೆಯಾಗಬೇಕು ಎಂದು ಆಗ್ರಹಿಸಿದರು.

ADVERTISEMENT

ಪಡಿತರ ಕಿಟ್, ಟೂಲ್‌ಕಿಟ್, ಸುರಕ್ಷಾ ಕಿಟ್ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡಬೇಕು.ಫಲಾನುಭವಿಗೆ ನೇರ ಹಣ ವರ್ಗಾವಣೆ ಕೈ ಬಿಟ್ಟು ವಿವಿಧ ಸಾಮಗ್ರಿಗಳನ್ನು ಖರೀದಿಸುತ್ತಿರುವುದು ನಿರಂತವಾಗಿ ನಡೆಯುತ್ತಲೇ ಇದೆ. ಇದು ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶವಾಗಿದೆ. ಕೂಡಲೇ ಈ ಕ್ರಮಗಳನ್ನು ಕೈ ಬಿಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಮೊರೆಹೋಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಕಾರ್ಮಿಕ ಸಂಘದ ಕಾರ್ಯದರ್ಶಿ ಅರವಿಂದ್, ರಾಜ್ಯ ಕಟ್ಟಡ ಮತ್ತುಇತರೆ ನಿರ್ಮಾಣ ಸಂಘದ ಮೋಹನ್ ಕುಮಾರ್, ಆನಂದ್ ಕೆಲವತ್ತಿ, ಮಹೇಶ್, ಆಂಥೋಣಿ,ಥಾಮಸ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.