ಜಾವಗಲ್: ‘ಸಂವಿಧಾನ ರಚಿಸುವ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ ಕೀರ್ತಿ ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ’ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.
ಗ್ರಾಮದ ಗಾಂಧಿನಗರದಲ್ಲಿ ಸೋಮವಾರ ಭೀಮ್ ಆರ್ಮಿ ಹಾಗೂ ಡಿ.ಎಸ್.ಎಸ್.ಸಂಘಟನೆಯಿಂದ ಆಯೋಜಿಸಲಾಗಿದ್ದ ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಿ.ಆರ್ ಅಂಬೇಡ್ಕರ್ ಅವರು ಅನೇಕ ವಿಚಾರಧಾರೆಗಳನ್ನು ದೇಶದ ಜನರಿಗೆ ನೀಡಿದ್ದು, ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಜೀವಿಸಬೇಕು’ ಎಂದು ತಿಳಿಸಿದರು.
‘ಸಮಾಜದಲ್ಲಿ ಸಮಾನತೆಯನ್ನು ಸೃಷ್ಟಿಸಲು ಅವರು ಮಾಡಿದ ಹೋರಾಟದ ಪ್ರತಿಫಲವಾಗಿ, ಇಂದು ದೇಶದ ಕಟ್ಟಕಡೆಯ ವ್ಯಕ್ತಿಯೂ ಉತ್ತಮ ಶಿಕ್ಷಣವನ್ನು ಪಡೆಯುವುದರ ಜೊತೆಗೆ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಗುತ್ತಿದೆ’ ಎಂದು ಸ್ಮರಿಸಿದರು.
ಗ್ರಾಮದ ದಲಿತ ಮುಖಂಡರಾದ ದೇವರಾಜ್, ಮೋಹನ್, ಜೆ.ಟಿ.ರಾಜಣ್ಣ, ಚಿಕ್ಕಯ್ಯ ಹಾಗೂ ಬಿಜೆಪಿ ಮುಖಂಡರಾದ ರಮೇಶ್, ಟೈಲರ್ ಪಾಪಣ್ಣ ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.