ADVERTISEMENT

ದೇವರಾಜ ಅರಸು | ಭೂಸುಧಾರಣೆ ಕಾಯ್ದೆ ಪಿತಾಮಹ: ಎಚ್.ಮಲ್ಲಿಕಾರ್ಜುನ್

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 2:02 IST
Last Updated 22 ಆಗಸ್ಟ್ 2025, 2:02 IST
ಆಲೂರು ಮಿನಿ ವಿಧಾನಸೌಧ ಆವರಣದಲ್ಲಿ ನಡೆದ ಡಿ.ದೇವರಾಜ ಅರಸು ರವರ 110ನೇ ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್ ಎಚ್. ಮಲ್ಲಿಕಾರ್ಜುನ ಉದ್ಘಾಟಿಸಿದರು
ಆಲೂರು ಮಿನಿ ವಿಧಾನಸೌಧ ಆವರಣದಲ್ಲಿ ನಡೆದ ಡಿ.ದೇವರಾಜ ಅರಸು ರವರ 110ನೇ ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್ ಎಚ್. ಮಲ್ಲಿಕಾರ್ಜುನ ಉದ್ಘಾಟಿಸಿದರು   

ಆಲೂರು: ಡಿ.ದೇವರಾಜ ಅರಸು ಉಳುವವನೇ ಭೂಮಿ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣಾ ಕಾಯ್ದೆ ತಂದ ಪಿತಾಮಹ ಅವರು ಎಂದು ತಹಶೀಲ್ದಾರ್ ಎಚ್.ಮಲ್ಲಿಕಾರ್ಜುನ್ ತಿಳಿಸಿದರು.

ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಿನಿ ವಿದಾನಸೌಧ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ರವರ 110ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ದೇವರಾಜ ಅರಸು ಅವರ ಆಡಳಿತ ಅವಧಿಯಲ್ಲಿ ಭೂಸುಧಾರಣೆ ಜೀತ ಪದ್ಧತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಕಾಯ್ದೆಗಳು, ಅಂಗವಿಕಲರಿಗೆ ಮಾಸಿಕ ವೇತನ, ವಿಧವಾ ವೇತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಸಾಮಾಜಿಕ ಸುಧಾರಣೆಗೆ ಶ್ರಮಿಸಿದವರು ಎಂದರು.

ADVERTISEMENT

ಮುಖ್ಯ ಭಾಷಣಕಾರರಾಗಿದ್ದ ಸಾಹಿತಿ ಶಾಂತಅತ್ನಿ ಮಾತನಾಡಿ, ‘ಡಿ. ದೇವರಾಜು ಅರಸು ಅವರು ಮೈಸೂರು ವಿಶ್ವವಿದ್ಯಾಲಯದಿಂದ ವಿಜ್ಞಾನ ಪದವಿ ಪಡೆದ ನಂತರ, ತಮ್ಮ ಹಳ್ಳಿಗೆ ಹಿಂತಿರುಗಿ ಕೃಷಿಯಲ್ಲಿ ತೊಡಗಿಕೊಂಡರು. ಇದೇ ಸಮಯದಲ್ಲಿ ಅವರು ರಾಜಕೀಯದಲ್ಲಿ ಆಸಕ್ತಿ ಬೆಳೆಸಿಕೊಂಡು 1952ರಲ್ಲಿ ಮೊದಲ ಬಾರಿಗೆ ರಾಜಕೀಯ ಪ್ರವೇಶಿಸಿದರು. ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆಗೆ ಎಲ್. ಜಿ. ಹಾವನೂರು ಅವರ ನೇತೃತ್ವದಲ್ಲಿ ಆಯೋಗ ರಚಿಸಿದರು. ಈ ಆಯೋಗದ ವರದಿ ಆಧಾರದ ಮೇಲೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಜಾರಿಗೊಳಿಸಿದರು’ ಎಂದರು.

ಬಿ.ಸಿ ಶಂಕರಾಚಾರ್ ಮಾತನಾಡಿ, ಡಿ.ದೇವರಾಜು ಅರಸು ಅವರು ಮುಖ್ಯಮಂತ್ರಿಯಾದ ಸಂದರ್ಭ  20 ಅಂಶಗಳ ಕಾರ್ಯಕ್ರಮ ಇಡೀ ದೇಶದ ಗಮನ ಸೆಳೆಯಿತು. ಭೂಸುಧಾರಣೆ ಕಾಯ್ದೆಯನ್ನು ಜಾರಿಗೆ ತಂದು ಬಡವರ ಹಸಿವು ನೀಗಿಸಲು ಅಂತ್ಯೋದಯ ಯೋಜನೆ ಜಾರಿಗೆ ತಂದರು ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸುಬ್ರಮಣ್ಯಶರ್ಮ, ಬಿಇಒ ಕೃಷ್ಣೇಗೌಡ, ನೌಕರರ ಸಂಘದ ಅಧ್ಯಕ್ಷ ವರದರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.