ADVERTISEMENT

‘ಮೊದಲ ಹಂತದಲ್ಲಿ ಚುನಾವಣೆ ನಡೆದ 14 ರಲ್ಲಿ 10 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ’

ಅತಂತ್ರ ಲೋಕಸಭೆ ನಿರ್ಮಾಣ: ದೇವೇಗೌಡ ಅಭಿಮತ

​ಪ್ರಜಾವಾಣಿ ವಾರ್ತೆ
Published 2 ಮೇ 2019, 15:38 IST
Last Updated 2 ಮೇ 2019, 15:38 IST
   

ಹಾಸನ: ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಕ್ಷೇತ್ರಗಳಲ್ಲಿ 10 ಸ್ಥಾನಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು.

ಹೊಳೆನರಸೀಪುರ ತಾಲ್ಲೂಕು ಪಡುವಲಹಿಪ್ಪೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲೂ ರಾಹುಲ್‌ಗಾಂಧಿ ಹಾಗೂ ಕಾಂಗ್ರೆಸ್‌ ನಾಯಕರ ಜೊತೆ ಜಂಟಿ‌ ಪ್ರಚಾರ ಮಾಡಲಾಗುವುದು ಎಂದರು.

ರಾಜ್ಯ ಸಮ್ಮಿಶ್ರ ಸರ್ಕಾರ ಪರ್ಸೆಂಟೆಜ್‌ ಸರ್ಕಾರ ಎಂಬ ಪ್ರಧಾನಿ ಆರೋಪಕ್ಕೆ ತಿರುಗೇಟು ನೀಡಿದ ಗೌಡರು, ರಫೇಲ್‌ ಪ್ರಕರಣದಲ್ಲಿ ₹3 ಸಾವಿರ ಕೋಟಿ ಹಗರಣ ನಡೆದಿದೆ ಎಂಬ ಆರೋಪವಿದೆ. ರು ಲಘುವಾಗಿ ಮಾತನಾಡುವುದನ್ನು ಬಿಟ್ಟರೆ ಅವರಿಗೂ ಗೌರವ ಬರುತ್ತದೆ ಎಂದರು.

ADVERTISEMENT

‘5 ವರ್ಷಗಳಲ್ಲಿ 10 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಹುಸಿಯಾಯಿತು. ಮೋದಿಗೆ ಸ್ಪಷ್ಟ ಬಹುಮತ ಬರಲ್ಲ. ನಮಗೆ ಬಹುಮತ ಬರಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.