ADVERTISEMENT

ಹಾಸನದಲ್ಲಿ ಸಂಭ್ರಮದ ಹನುಮ ಜಯಂತಿ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2020, 15:10 IST
Last Updated 27 ಡಿಸೆಂಬರ್ 2020, 15:10 IST
ಹಾಸನದ ನೀರುವಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಣ್ಣೆ ಅಲಂಕಾರ
ಹಾಸನದ ನೀರುವಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಣ್ಣೆ ಅಲಂಕಾರ   

ಹಾಸನ: ನಗರದ ವಿವಿಧ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿಯನ್ನು ಸಂಭ್ರಮ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.

ನಗರದ ಗಾಂಧಿ ಬಜಾರ್‌ನ ನೀರುವಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 4 ರಿಂದ ರಾಮತಾರಕ, ಹನುಮ ಸಹಸ್ರ ಹೋಮ ನಡೆದವು. ನಂತರ ದೇವರಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು. ಪವಮಾನ ಹಾಗೂ ಪಂಚಾಮೃತ ಅಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮಾಡಲಾಯಿತು. ಕೋವಿಡ್ ಹಿನ್ನೆಲೆ ಪರಸ್ಪರ ಅಂತರ ಕಾಪಾಡಿಕೊಂಡು ಸರದಿ ಸಾಲಿನಲ್ಲಿ ಬಂದು ಭಕ್ತರು ದೇವರ ದರ್ಶನ ಪಡೆದರು.

ಮಹಿಳೆ, ಮಕ್ಕಳು ಹಾಗೂ ಹಿರಿಯ ನಾಗರಿಕರು ಬೆಳಿಗ್ಗೆಯಿಂದಲೇ ದೇವಸ್ಥಾನ ಕಡೆಗೆ ಬಂದರು. ರೈಲ್ವೆ ನಿಲ್ದಾಣ ಸಮೀಪದ ಆಂಜನೇಯ ಸ್ವಾಮಿ ದೇಗುಲ ಹಾಗೂ ಪಾರ್ಕ್‌ ರಸ್ತೆಯಲ್ಲಿರುವ ಸೀತಾರಾಮಾಂಜನೇಯ ದೇವಸ್ಥಾನಗಳಲ್ಲೂ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಷ್ಟಾರ್ಥ ಸಿದ್ಧಿಗಾಗಿ ಜನರು ಆಂಜನೇಯನಿಗೆ ಪ್ರಾರ್ಥನೆ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.