ADVERTISEMENT

ಜಾವಗಲ್: ಧರ್ಮಸ್ಥಳಕ್ಕೆ 16ನೇ ವರ್ಷದ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 13:40 IST
Last Updated 3 ಮಾರ್ಚ್ 2025, 13:40 IST
ಜಾವಗಲ್ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಸಮಿತಿಯಿಂದ ಹಮ್ಮಿಕೊಂಡ ಧರ್ಮಸ್ಥಳ ಪಾದಯಾತ್ರೆ ಅಂಗವಾಗಿ ಸಂಘದ ಸದಸ್ಯರು ಸೋಮವಾರ ವಾಹನಗಳಿಗೆ ಪೂಜೆ ಸಲ್ಲಿಸಿದರು
ಜಾವಗಲ್ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಸಮಿತಿಯಿಂದ ಹಮ್ಮಿಕೊಂಡ ಧರ್ಮಸ್ಥಳ ಪಾದಯಾತ್ರೆ ಅಂಗವಾಗಿ ಸಂಘದ ಸದಸ್ಯರು ಸೋಮವಾರ ವಾಹನಗಳಿಗೆ ಪೂಜೆ ಸಲ್ಲಿಸಿದರು   

ಪ್ರಜಾವಾಣಿ ವಾರ್ತೆ

ಜಾವಗಲ್: ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ 16ನೇ ವರ್ಷದ ಧರ್ಮಸ್ಥಳ ಪಾದಯಾತ್ರೆ ಕಾರ್ಯಕ್ರಮಕ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಚಾಲನೆ ನೀಡಿದರು.

ಗ್ರಾಮದ ಗಂಗಾಧರೇಶ್ವರ ದೇವಾಲಯದಲ್ಲಿ ಸೋಮವಾರ ಮುಂಜಾನೆ ವಿಶೇಷ ಪೂಜೆ ಹಾಗೂ ಕರ್ಪೂರದಾರತಿ ಬೆಳಗುವ ಮೂಲಕ ಗ್ರಾಮದ 200ಕ್ಕೂ ಹೆಚ್ಚು ಮಂದಿ ಪಾದಯಾತ್ರೆ ಆರಂಭಿಸಿದರು.

ADVERTISEMENT

ಜಾವಗಲ್ ಗ್ರಾಮದಿಂದ ಹಳೇಬೀಡು, ಬೇಲೂರು ಮಾರ್ಗವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಲಾಗಿದ್ದು, ಮಾರ್ಚ್ 5ರಂದು ಧರ್ಮಸ್ಥಳವನ್ನು ತಲುಪಿ ಗ್ರಾಮದಲ್ಲಿ ಸಂಗ್ರಹಿಸಿರುವ ಅಕ್ಕಿ, ತರಕಾರಿ, ತೆಂಗಿನಕಾಯಿ ಹಾಗೂ ಇನ್ನಿತರೆ ಆಹಾರ ಪದಾರ್ಥಗಳನ್ನು ಧರ್ಮಸ್ಥಳದ ಅನ್ನಸಂತರ್ಪಣೆ ಕಾರ್ಯಕ್ಕೆ ಅರ್ಪಿಸಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು ಗ್ರಾಮಕ್ಕೆ ಹಿಂದಿರುಗಲಾಗುವುದು ಎಂದು ಪಾದಯಾತ್ರೆ ಸೇವಾ ಸಮಿತಿಯ ಸದಸ್ಯರು ತಿಳಿಸಿದರು.

ಪಾದಯಾತ್ರೆ ಸೇವಾ ಸಮಿತಿಯ ಸದಸ್ಯ ಶಿವಪ್ರಕಾಶ್ ಮಾತನಾಡಿ, ‘ಕಳೆದ 16 ವರ್ಷಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಈ ವರ್ಷವೂ ಜಾವಗಲ್ ಒಳಗೊಂಡಂತೆ ಸುತ್ತಮುತ್ತಲಿನ ಗ್ರಾಮಗಳ 200ಕ್ಕೂ ಹೆಚ್ಚು ಗ್ರಾಮಸ್ಥರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

ಪಾದಯಾತ್ರೆ ಸೇವಾ ಸಮಿತಿಯ ಸದಸ್ಯರಾದ ಶ್ರೀನಿವಾಸ್, ಕುಮಾರ್, ಮಂಜುನಾಥ್, ಮಹೇಶ್, ವೆಂಕಟೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.