ADVERTISEMENT

ಉಚಿತ ಲಸಿಕೆ, ಔಷಧಿ ವಿತರಣೆಗೆ ಒತ್ತಾಯ

ಶ್ರಮ ಕಚೇರಿ ಎದುರು ಸಿಪಿಎಂ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 12:16 IST
Last Updated 1 ಜೂನ್ 2021, 12:16 IST
ಹಾಸನದ ಶ್ರಮ ಕಚೇರಿ ಎದುರು ಸಿಪಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಾಸನದ ಶ್ರಮ ಕಚೇರಿ ಎದುರು ಸಿಪಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.   

ಹಾಸನ: ಉಚಿತ ಲಸಿಕೆ, ಔಷಧಿ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಎಂ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರಮ ಕಚೇರಿ ಎದುರು ಕಾರ್ಯಕರ್ತರು, ‘ಕೋವಿಡ್ ಎರಡನೇ ಅಲೆಜೀವ ಉಳಿಸಿ- ಜೀವನ ರಕ್ಷಿಸಿ’ಎಂಬ ಘೋಷಣೆ ಕೂಗಿದರು.

ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ. ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ತಡ ಮಾಡದೇ ಈಗಿನಿಂದಲೇ ಮೂರನೇ ಅಲೆಗೆ ಸನ್ನದ್ದವಾಗಬೇಕು. ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ರೈತರು ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಬೇಕು. ಉದ್ಯೋಗ ಖಾತ್ರಿಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ
ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್, ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್, ಸದಸ್ಯರಾದ ಜಿ.ಪಿ. ಸತ್ಯನಾರಾಯಣ, ಎಂ.ಜಿ. ಪೃಥ್ವಿ,ಪುಷ್ಪ, ಅರವಿಂದ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.