ADVERTISEMENT

ಹಾಸನ: ಲಂಚ ಪಡೆಯುತ್ತಿದ್ದ ಅಲ್ಪಸಂಖ್ಯಾತ ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 20:57 IST
Last Updated 5 ಆಗಸ್ಟ್ 2024, 20:57 IST
ಗೋಪಾಲ್‌
ಗೋಪಾಲ್‌   

ಹಾಸನ: ಸಾಲದ ಅರ್ಜಿ ಅನುಮೋದಿಸಲು ₹40 ಸಾವಿರ ಲಂಚ ಪಡೆಯುತ್ತಿದ್ದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಗೋಪಾಲ್ ಎಚ್.ಆರ್‌. ಅವರು ಸೋಮವಾರ ತಮ್ಮ ಕಚೇರಿಯಲ್ಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದರು.

ಸ್ವಯಂ ಉದ್ಯೋಗಕ್ಕಾಗಿ ₹20 ಲಕ್ಷ ನೇರ ಸಾಲಕ್ಕೆ ಅರ್ಜಿ ಹಾಕಿದ್ದ ಅಕ್ಬರ್ ಎಂಬುವವರಿಗೆ ಅಧಿಕಾರಿಯು ₹1.50 ಲಕ್ಷ ಲಂಚ ಕೊಡುವಂತೆ ಕೇಳಿದ್ದರು.ನಂತರ,  ₹70 ಸಾವಿರಕ್ಕೆ ಒಪ್ಪಿಕೊಂಡಿದ್ದರು. ಅರ್ಜಿದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕಾಯುಕ್ತ ಎಸ್‌ಪಿ ಮಲಿಕ್‌ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಬಾಲು ಹಾಗೂ ಶಿಲ್ಪ ಕಾರ್ಯಾಚರಣೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.