ADVERTISEMENT

ಇ.ಡಿಗೆ ದಾಖಲೆ ಕೊಟ್ಟು ನಿರ್ದೋಷಿ ಆಗಬೇಕಿತ್ತು: ನಳೀನ್ ಕುಮಾರ್ ಕಟೀಲ್

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 10:14 IST
Last Updated 4 ಸೆಪ್ಟೆಂಬರ್ 2019, 10:14 IST
   

ಹಾಸನ: ‘ಕಾನೂನು ಎಲ್ಲರಿಗೂ ಒಂದೇ. ಸಂವಿಧಾನ ಮತ್ತು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು ಜಾರಿ ನಿರ್ದೇನಾಲಯದ (ಇ.ಡಿ) ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಟ್ಟು ನಿರ್ದೋಷಿ ಆಗಬೇಕಿತ್ತು. ಅದನ್ನೆಲ್ಲ ಬಿಟ್ಟು ಬೀದಿಗೆ ಬಂದು ಕಲ್ಲು ಎಸೆಯುವುದು ಯಾವ ಮಾರ್ಗ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಶಿವಕುಮಾರ್ ವಿರುದ್ಧ ಎರಡು ವರ್ಷದಿಂದ ತನಿಖೆ ನಡೆಯುತ್ತಿದೆ. ಏಕಾಏಕಿ ಅವರ ಬಂಧನವಾಗಿಲ್ಲ.

ಬಿಜೆಪಿಗೂ ಅವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ. ತನಿಖಾ ಸಂಸ್ಥೆಗೆ ಸಹಕಾರ ನೀಡಬೇಕು. ಹತ್ತಾರು ರಾಜಕಾರಣಿಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.