ADVERTISEMENT

ನವಿಲೆ ನಾಗೇಶ್ವರ ಕ್ಷೇತ್ರಕ್ಕೆ ಶಿವಕುಮಾರ್‌ ರಹಸ್ಯ ಭೇಟಿ

ಮುಖ್ಯಮಂತ್ರಿ ಸ್ಥಾನದ ಚರ್ಚೆಯ ಸಂದರ್ಭದಲ್ಲಿ ವಿಶೇಷ ಪೂಜೆ: ಕುತೂಹಲ

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 15:27 IST
Last Updated 23 ಜುಲೈ 2025, 15:27 IST
   

ನುಗ್ಗೇಹಳ್ಳಿ (ಹಾಸನ): ಖಾಸಗಿ ಭದ್ರತೆಯೊಂದಿಗೆ ಹೋಬಳಿಯ ಪುರಾಣ ಪ್ರಸಿದ್ಧ ನವಿಲೆ ನಾಗೇಶ್ವರ ಕ್ಷೇತ್ರಕ್ಕೆ ಬುಧವಾರ ಸಂಜೆ ರಹಸ್ಯ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದರು.

ಈ ಹಿಂದೆ ಬಿ.ಎಸ್. ಯಡಿಯೂರಪ್ಪ, ನವಿಲೆ ನಾಗೇಶ್ವರ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಮುಖ್ಯಮಂತ್ರಿಯಾಗಿದ್ದರು. ಇದೀಗ ಮುಖ್ಯಮಂತ್ರಿ ಸ್ಥಾನ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ದೇವಾಲಯಕ್ಕೆ ರಹಸ್ಯ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಶಿವಕುಮಾರ್‌ ಭೇಟಿಯ ಬಗ್ಗೆ ಪೊಲೀಸ್ ಇಲಾಖೆಗೂ ಮಾಹಿತಿ ಇರಲಿಲ್ಲ.

ವಾರದ ಹಿಂದಷ್ಟೇ ನವಿಲೆ ಗ್ರಾಮದ ಶಿವಾನುಗ್ರಹ ಸೇವಾ ಟ್ರಸ್ಟ್ ವತಿಯಿಂದ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ನಡೆದಿತ್ತು . ಆ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಕೊನೆಗಳಿಗೆಯಲ್ಲಿ ಅವರ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಆ ಹಿನ್ನೆಲೆಯಲ್ಲಿಯೂ ಭೇಟಿ ನೀಡಿರಬಹುದು ಎಂದು ಹೇಳಲಾಗುತ್ತಿದೆ.

ADVERTISEMENT

ಕ್ಷೇತ್ರದಲ್ಲಿ ಪುನರ್ ನಿರ್ಮಾಣಗೊಂಡಿರುವ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರ ಸಿಂಹಾಸನ ಪೀಠಕ್ಕೆ ಡಿ.ಕೆ. ಶಿವಕುಮಾರ್, ವಿಶೇಷ ಪೂಜೆ ಸಲ್ಲಿಸಿದರು.

ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ, ಕ್ಷೇತ್ರದ ಪರವಾಗಿ ಶಿವಕುಮಾರ್‌ ಅವರನ್ನು ಸನ್ಮಾನಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎನ್. ಪರಮೇಶ್, ಮುಖಂಡರಾದ ಮರಗೂರು ಅನಿಲ್, ಹುಲಿಕೆರೆ ಸಂಪತ್ ಕುಮಾರ್, ಶಿವಾನುಗ್ರಹ ಸೇವಾ ಟ್ರಸ್ಟ್ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.