ADVERTISEMENT

ಹಾಸನ | ಕಾಂಗ್ರೆಸ್ ಗೂಂಡಾವರ್ತನೆ: ಬಿಜೆಪಿ ಪ್ರತಿಭಟನೆ

ಸಭ್ಯತೆಯಿಂದ ನಡೆದುಕೊಳ್ಳುವುದು ಜನಪ್ರತಿನಿಧಿಗಳ ಕರ್ತವ್ಯ: ಶಾಸಕ ಪ್ರೀತಂಗೌಡ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 15:47 IST
Last Updated 4 ಜನವರಿ 2022, 15:47 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಪ್ರೀತಂ ಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಪ್ರೀತಂ ಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲೇ ರಾಮನಗದಲ್ಲಿಕಾಂಗ್ರೆಸ್ ನಾಯಕರು ಗೂಂಡಾವರ್ತನೆ ತೋರಿದ್ದಾರೆ ಎಂದು ಆರೋಪಿಸಿ ನಗರದಲ್ಲಿಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದಮುಖಂಡರು ಹಾಗೂ ಕಾರ್ಯಕರ್ತರು, ಸಂಸದ ಸುರೇಶ್‌ ಹಾಗೂ ಅವರ ಸಹೋದರಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದರು.

ಸಂಸದ ಡಿ.ಕೆ. ಸುರೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ರವಿ ಮೊದಲಾದವರು ಉನ್ನತಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿ, ವೇದಿಕೆಯಲ್ಲೇ ನಿಂದಿಸಿಹಲ್ಲೆ ಮಾಡಲು ಮುಂದಾಗಿದ್ದು ಖಂಡನೀಯ. ಸಂವಿಧಾನ ಶಿಲ್ಪಿ ಬಿ.ಆರ್‌.ಅಂಬೇಡ್ಕರ್‌ ಮತ್ತು ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣದ ಕಾರ್ಯಕ್ರಮದಲ್ಲಿ ಸುರೇಶ್ ಈ ರೀತಿ ನಡೆದುಕೊಂಡಿರುವುದು ಮಹಾನ್ ವ್ಯಕ್ತಿಗಳಿಗೆ ಮಾಡಿದ ಅವಮಾನವಾಗಿದೆ ಎಂದು ಬೇಸರವ್ಯಕ್ತಪಡಿಸಿದರು.

ADVERTISEMENT

ಶಾಸಕ ಪ್ರೀತಂಗೌಡ ಮಾತನಾಡಿ, ‘ಕಾಂಗ್ರೆಸ್ ನಾಯಕರ ಪಾಳೆಗಾರ ಸಂಸ್ಕೃತಿಯನ್ನುನಾಡಿನ ಜನತೆ ಗಮನಿಸಿದ್ದಾರೆ. ರಾಮನಗರವನ್ನು ಅವರಿಗೆ ಜಿಪಿಎ ಬರೆದುಕೊಟ್ಟಿಲ್ಲ. ಏನಾದರೂ ತಪ್ಪಾಗಿದ್ದರೆ ಸಮಯ ತೆಗೆದುಕೊಂಡು ಜನರ ಮುಂದೆ ಹೇಳಬೇಕಿತ್ತು.ಅದನ್ನು ಬಿಟ್ಟು ಹೀಗೆ ವರ್ತನೆ ಮಾಡಿದ್ದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜಕಾರಣಿಗಳು ತಲೆ ತಗ್ಗಿಸುವ ಕೆಲಸವನ್ನು ಸುರೇಶ್‌ಮಾಡಿದ್ದಾರೆ.ಸಭ್ಯತೆಯಿಂದ ನಡೆದುಕೊಳ್ಳುವುದು ಜನಪ್ರತಿನಿಧಿಗಳ ಕರ್ತವ್ಯ. ಅದನ್ನು ಬಿಟ್ಟು ಧಿಕ್ಕಾರಕೂಗಿಸುವುದು, ಮೈಕ್ ಕೀಳೋದು ಶೋಭೆ ತರುವುದಿಲ್ಲ. ಯಾರೇ ಆಗಲಿ ಉತ್ತಮಸಂಸದೀಯ ಪಟುವಾಗಿದ್ದರೆ ಸಾಲದು, ನಾಗರೀಕತೆಯನ್ನೂ ಬೆಳೆಸಿಕೊಳ್ಳಬೇಕು’ ಎಂದು ಕುಟುಕಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಸುರೇಶ್‌, ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್‌, ಮುಖಂಡರಾದ ನವಿಲೆ ಅಣ್ಣಪ್ಪ, ಎಚ್‌.ಎಂ.ಸುರೇಶ್ ಕುಮಾರ್‌, ನಗರಸಭೆ ಸದಸ್ಯ ದಯಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.