ಅರಸೀಕೆರೆ: ‘ಕಾಲೇಜು ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಆಕರ್ಷಣೆಗೆ ಒಳಗಾಗಿ ತೆಗೆದುಕೊಳ್ಳುವ ಆತುರದ ನಿರ್ಧಾರಗಳು ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ’ ಎಂದು ಇಲ್ಲಿನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕವಿತಾ.ಕೆ.ಜಿ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಸಾಲಿನ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
‘ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮತ್ತು ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಹಾಗೆಯೇ ವಿದ್ಯಾರ್ಥಿಗಳು ದೇಶದ ಸಾಧಕರನ್ನು ಪ್ರೇರಣೆಯಾಗಿಸಿಕೊಂಡಿರಬೇಕು. ಬರುವ ಸಮಸ್ಯೆಗಳನ್ನು ಮೆಟ್ಟಿನಿಂತಾಗಲೇ ಗುರಿ ಮುಟ್ಟಲು ಅವಕಾಶವಾಗುತ್ತದೆ. ಓದಿನ ಜೊತೆಯಲ್ಲಿ ಸಹಪಠ್ಯ ಚಟುವಟಿಕೆಗಳು ಸರ್ವಾಂಗೀಣ ಪ್ರಗತಿಗೆ ಪೂರಕ’ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಗೀತಾ ಮಾತನಾಡಿ,‘2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಬರಲು ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪರಿಶ್ರಮ ಪಡಬೇಕು’ ಎಂದರು.
ಜಾಜೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಲೀಲಾಬಾಯಿ ಚಂದ್ರಶೇಖರ್ ಮಾತನಾಡಿ,‘ಸರ್ಕಾರಿ ಕಾಲೇಜುಗಳು ಉನ್ನತ ಮಟ್ಟಕ್ಕೆ ಬೆಳೆದಾಗ ಬಡವರ ಮಕ್ಕಳೂ ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಹೇಳಿದರು.
ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಸಂಚಾಲಕರು ಉಷಾ.ಎಚ್.ಪಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಿದ್ದೇಶ್ ಜಾಜೂರು, ದೈಹಿಕ ಶಿಕ್ಷಣ ನಿರ್ದೇಶಕ ಹರೀಶ್, ಪ್ರಾಧ್ಯಾಪಕ ಎಸ್.ನಾರಾಯಣ, ರಾಜೇಶ್ ಖನ್ನಾ, ಡಾ.ಭಾಸ್ಕರ್, ಸುನಿಲ್ ಕುಮಾರ್, ಹರೀಶ್ ಕುಮಾರ್, ಶಿವಕುಮಾರ್, ರಾಘವೇಂದ್ರ, ಹರೀಶ್, ಗಂಗಾ, ಮಮತಾ, ರವೀಶ್, ವಿಶ್ವನಾಥ್ ಸೇರಿದಂತೆ ಸಿಬ್ಬದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.