ADVERTISEMENT

ಹಾಸನ: ವೃದ್ಧ ದಂಪತಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 6:27 IST
Last Updated 1 ಸೆಪ್ಟೆಂಬರ್ 2020, 6:27 IST
ಕಾಲಿಗೆ ಗುಂಡೇಟು ಬಿದ್ದಿರುವ ವೃದ್ಧ ದಂಪತಿ‌ ಕೊಲೆ ಪ್ರಕರಣದ ಆರೋಪಿ
ಕಾಲಿಗೆ ಗುಂಡೇಟು ಬಿದ್ದಿರುವ ವೃದ್ಧ ದಂಪತಿ‌ ಕೊಲೆ ಪ್ರಕರಣದ ಆರೋಪಿ   

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಆಲಗೊಂಡನ ಹಳ್ಳಿ ವೃದ್ಧ ದಂಪತಿ‌ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಸಿಪಿಐ ಸಿದ್ದರಾಮೇಶ್ವರ ಗುಂಡು ಹಾರಿಸಿದ್ದಾರೆ.

ಎರಡು ದಿನಗಳ‌ ಹಿಂದೆಯಷ್ಟೇ ತೋಟದ ಮನೆಯಲ್ಲಿ ವಾಸವಾಗಿದ್ದ ದಂಪತಿ ಕೊಲೆ‌ಗೈದು ನಗದು, ಚಿನ್ನಾಭರಣ ದೋಚಲಾಗಿತ್ತು.

ಆರೋಪಿಗಳು ಅಣ್ಣೇನಹಳ್ಳಿಯ ಕೋಳಿ ಫಾರಂನಲ್ಲಿ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಶರಣಾಗುವಂತೆ ಎಚ್ಚರಿಕೆ ನೀಡಿ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ADVERTISEMENT

ರೌಡಿ ಪ್ರಸಾದ್ ಅಲಿಯಾಸ್ ಗುಂಡ ಎಂಬಾತ ತಪ್ಪಿಸಿಕೊಳ್ಳುವ ವೇಳೆ ಡಿಸಿಐಬಿ ಇನ್ ಸ್ಪೆಕ್ಟರ್ ವಿನಯ್ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ಅಧಿಕಾರಿ ರಕ್ಷಣೆಗೆ ಧಾವಿಸಿದ ಬೇಲೂರು ಸಿಪಿಐ ಸಿದ್ದರಾಮೇಶ್ವರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ‌, ಬಂಧಿಸಿದರು.

ಗಾಯಗೊಂಡಿರುವ ಆರೋಪಿ ಮತ್ತು ಅಧಿಕಾರಿಯನ್ನು ಹಿಮ್ಸ್‌ನಲ್ಲಿ ದಾಖಲಿಸಲಾಗಿದೆ.

ಬರಗೂರು ಗ್ರಾಮದ ಪ್ರಸಾದ್, ದ್ವಾರಕಿ ಅವರನ್ನು ಬಂಧಿಸಲಾಗಿದೆ. ಇನ್ನು ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸ್ಥಳಕ್ಕೆ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ವಿಫುಲ್ ಕುಮಾರ್ ಪೋಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‌ಗೌಡ, ಎಎಸ್ಪಿ ನಂದಿನಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.