ಬೇಲೂರು: ಏಳನೇ ವೇತನ ಆಯೋಗವನ್ನು ಜಾರಿಗೊಳಿಸುವಂತೆ ಸದನದಲ್ಲಿ ಒತ್ತಾಯಿಸಲಾಗುವುದು ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.
ಸರ್ಕಾರಿ ನೌಕರರ ಸಂಘ ಮಂಗಳವಾರ ಇಲ್ಲಿ ಆಯೋಜಿಸಿದ್ದ, ನಿವೃತ್ತ ನೌಕರರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಯಾವುದೇ ಯೋಜನೆಗಳು ಯಶಸ್ವಿಯಾಗಬೇಕಾದರೂ ಅಧಿಕಾರಿಗಳ ಪಾತ್ರ ಬಹುಮುಖ್ಯ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಜಾರಿಗೆ ತರಲು ಹೋರಾಟ ಅನಿವಾರ್ಯವಾಗಿದೆ. ಆರ್.ಟಿ.ಐ ಹೆಸರಿನಲ್ಲಿ ನೌಕರರಿಗೆ ಹಿಂಸೆ ನೀಡುತ್ತಿದ್ದಾರೆ. ನೌಕರರು ರೈತರಿಗೆ, ಬಡವರಿಗೆ, ದಿನದಲಿತರಿಗೆ ಸಹಾಯ ಮಾಡುವ ಮನಸ್ಥಿತಿ ಯನ್ನು ಬೆಳೆಸಿಕೊಳ್ಳಬೇಕು ಎಂದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ಸರ್ಕಾರಿ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಹೇಳಿದರು.
ಕ್ಷೇತ್ರಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸತೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಸಿ.ಎಚ್.ಲೋಕೇಗೌಡ, ಗೌರವಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷ ಪೂರ್ಣೇಶ್, ಕಾರ್ಯದರ್ಶಿ ಕೇಶವಕಿರಣ್, ಖಜಾಂಚಿ ಸಂತೋಷ್, ಭಾನುಪ್ರಕಾಶ್, ಮುಳ್ಳಯ್ಯ, ಪ್ರಕಾಶ್ ಕುಮಾರ್, ಪ್ರಕಾಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.