ADVERTISEMENT

ಹಾಸನ: ಗ್ರಾಮಸ್ಥರು ತೋಡಿದ್ದ ಖೆಡ್ಡಾಕ್ಕೆ ಬಿದ್ದ ಮರಿಯಾನೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2023, 8:29 IST
Last Updated 2 ಜನವರಿ 2023, 8:29 IST
   

ಹಾಸನ: ಸಕಲೇಶಪುರ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ಗ್ರಾಮಸ್ಥರು ತೋಡಿದ್ದ ಖೆಡ್ಡಾಕ್ಕೆ ಮರಿಯಾನೆ ಬಿದ್ದಿದೆ. ಕಾಡಾನೆಗಳ ಉಪಟಳದಿಂದ ಬೇಸತ್ತಿರುವ ಜನರು, ಆನೆಗಳನ್ನು ಸುರಕ್ಷಿತವಾಗಿ ಸೆರೆ ಹಿಡಿಯುವ ಉದ್ದೇಶದಿಂದ ಗ್ರಾಮಸ್ಥರೇ ಖೆಡ್ಡಾ ತೋಡಿದ್ದರು. ಇದೀಗ ಮರಿಯಾನೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

’ಖೆಡ್ಡಾಕ್ಕೆ ಬಿದ್ದಿರುವ ಆನೆಗೆ ನೀರು ಮತ್ತು ಆಹಾರ ಒದಗಿಸಲಾಗಿದೆ. ಗ್ರಾಮದಲ್ಲಿ ಆನೆಗಳಿಗೆ ತೊಂದರೆ ನೀಡುವ ಉದ್ದೇಶ ನಮ್ಮದಲ್ಲ. ಆನೆಗಳನ್ನು ಸುರಕ್ಷಿತವಾಗಿ ಹಿಡಿದುಕೊಡುತ್ತೇವೆ. ಅವುಗಳನ್ನು ಇಲ್ಲಿಂದ ಸ್ಥಳಾಂತರ ಮಾಡಬೇಕು. ಯಾವುದೇ ಕಾರಣಕ್ಕೂ ಈ ಆನೆಯನ್ನು ಮೇಲಕ್ಕೆ ಹತ್ತಿ ಮತ್ತೆ ಕಾಡಿಗೆ ಹೋಗಲು ಬಿಡುವುದಿಲ್ಲ. ಅರಣ್ಯ ಇಲಾಖೆಯವರು ಈ ಆನೆಯನ್ನು ಇಲ್ಲಿಂದ ಸ್ಥಳಾಂತರ ಮಾಡಬೇಕು‘ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸರ್ಕಾರಗಳಿಂದ ನಮಗೆ ಯಾವುದೇ ಪರಿಹಾರ ಸಿಗುವುದಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಒಬ್ಬರೇ ಒಬ್ಬ ಶಾಸಕರು ಕಾಡಾನೆ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿಲ್ಲ. ಸರ್ಕಾರ ಕೇವಲ ಪರಿಹಾರ ನೀಡುತ್ತಿದೆ. ಆದರೆ, ಆನೆಗಳನ್ನು ಶಾಶ್ವತವಾಗಿ ಸ್ಥಳಾಂತರಿಸಬೇಕು ಎನ್ನುವ ಮನವಿಗೆ ಸ್ಪಂದಿಸುತ್ತಿಲ್ಲ. ಅದಕ್ಕಾಗಿ ನಾವೇ ಆನೆಗಳನ್ನು ಹಿಡಿಯಲು ಈ ಉಪಾಯ ಮಾಡಿದ್ದೇವೆ ಎಂದು ಗ್ರಾಮದ ಜನರು ತಿಳಿಸಿದ್ದಾರೆ,

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.