ಅರಕಲಗೂಡು: ಡೆಂಗಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜಾಗೃತಿ ಕಾರ್ಯ ನಡೆಸಿದ್ದು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ತಿಳಿಸಿದರು.
ರಾಷ್ಟ್ರೀಯ ಡೆಂಗಿ ನಿಯಂತ್ರಣ ದಿನದ ಅಂಗವಾಗಿ ಬುಧವಾರ ಇಲ್ಲಿ ಪಿಡಿಒಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಇದು ಸೊಳ್ಳೆಯಿಂದ ಹರಡುವ ರೋಗ. ಸ್ವಚ್ಛತೆಗೆ ಆದ್ಯತೆ ನೀಡಿದರೆ ಸೊಳ್ಳೆಗಳ ನಿಯಂತ್ರಣ ಸಾಧ್ಯ. ರಸ್ತೆ ಚರಂಡಿಗಳಲ್ಲಿ ನೀರು, ಕೊಳಚೆ ತುಂಬಿ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗದಂತೆ ತಡೆಯಬೇಕು. ಪಂಚಾಯಿತಿಗಳು ಡೆಂಗಿ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ರೋಗ ಲಕ್ಷಣ ಇದ್ದವರು ವೈದ್ಯರಿಂದ ಚಿಕಿತ್ಸೆ ಪಡೆಯುಯಬೇಕು. ಕೋವಿಡ್ ತಡೆ ಕುರಿತು ಕೂಡ ಜಾಗೃತಿ ಮೂಡಿಸಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಿ.ಡಿ. ಪ್ರಕಾಶ್ ಮಾತನಾಡಿ, ಶಾಲೆ ಅಂಗನವಾಡಿ ಕೇಂದ್ರಗಳ ಬಳಿ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದರು. ಕೀಟ ಶಾಸ್ತ್ರಜ್ಞ ರಾಜೇಶ್ ಕುಲಕರ್ಣಿ ಡೆಂಗಿ ರೋಗ, ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿದರು. ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಟಿ. ಪರಮೇಶ್, ಹಿರಿಯ ಆರೋಗ್ಯ ನಿರೀಕ್ಷಕ ಚಂದ್ರೇಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.