ADVERTISEMENT

ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ನಿಧನ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2018, 10:38 IST
Last Updated 27 ನವೆಂಬರ್ 2018, 10:38 IST
ಎಚ್.ಎಸ್.ಪ್ರಕಾಶ್
ಎಚ್.ಎಸ್.ಪ್ರಕಾಶ್   

ಹಾಸನ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಬೆಂಗಳೂರಿನ ಬಿಜಿಎಸ್ ಅಪೊಲೊ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ನಾಲ್ಕು ಬಾರಿ ಜೆಡಿಎಸ್‌ನಿಂದ ಹಾಸನ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಸೋತಿದ್ದರು.ಹಾಸನ ನಗರಸಭೆಯ ಅಧ್ಯಕ್ಷರಾಗುವ ಮೂಲಕ ರಾಜಕೀಯ ಆರಂಭಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.ದೇವೇಗೌಡರ ಆಪ್ತವಲಯದಲ್ಲಿ ಇವರು ಗುರುತಿಸಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.