ADVERTISEMENT

ಪೊದೆಯೊಳಗೆ ಬಚ್ಚಿಟ್ಟಿದ್ದ ಸ್ಪೋಟಕ ವಸ್ತು ವಶ

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 14:14 IST
Last Updated 28 ಜನವರಿ 2021, 14:14 IST

ಹಾಸನ: ತಾಲ್ಲೂಕಿನ ಕಟ್ಟಾಯ ಹೋಬಳಿಯ ಗೊರೂರು ರಸ್ತೆ ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಸ್ಫೋಟಕ ವಸ್ತುಗಳನ್ನು ಗೊರೂರು ಠಾಣೆ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಸಾಗರ್ ಹಾಗೂ ತಂಡ ದಾಳಿ ನಡೆಸಿ, ಪೊದೆಯೊಳಗೆ ಗುಂಡಿ ತೆಗೆದು ಬಚ್ಚಿಟ್ಟಿದ್ದ 180 ಜಿಲೆಟಿನ್ ಕಡ್ಡಿಗಳು ಹಾಗೂ 6 ಕೆ.ಜಿ ಅಮೋನಿಯಂ ನೈಟ್ರೇಟ್‌ ವಶಪಡಿಸಿಕೊಂಡಿದೆ.

ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ ಎಂದು ಪಿಎಸ್‌ಐ ಸಾಗರ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.