ADVERTISEMENT

ಬೋನಿಗೆ ಬಿದ್ದ ಹೆಣ್ಣು ಚಿರತೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 12:31 IST
Last Updated 22 ಸೆಪ್ಟೆಂಬರ್ 2020, 12:31 IST
ಬೋನಿಗೆ ಬಿದ್ದ ಹೆಣ್ಣು ಚಿರತೆ
ಬೋನಿಗೆ ಬಿದ್ದ ಹೆಣ್ಣು ಚಿರತೆ   

ಹಾಸನ: ತಾಲ್ಲೂಕಿನ ಬೆಣಗಟ್ಟೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೋಮವಾರ ರಾತ್ರಿ ನಾಲ್ಕು ವರ್ಷದ ಹೆಣ್ಣು ಚಿರತೆ ಬಿದ್ದಿದೆ.

ಹಲವು ದಿನಗಳಿಂದ ಶಾಂತಿಗ್ರಾಮ, ಬೆಣಗಟ್ಟೆ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಕುರಿ, ಕರು ಹೊತ್ತೊಯ್ದು ತಿಂದು ಹಾಕಿತ್ತು. ಎಷ್ಟೋ ದಿನ ಹಗಲು ವೇಳೆ ಕಾಣಿಸಿಕೊಂಡು ಚಿರತೆ ಆತಂಕ ಸೃಷ್ಟಿಸಿತ್ತು. ಮಕ್ಕಳು, ಮಹಿಳೆಯರು, ಹಿರಿಯರು ಮನೆಯಿಂದ ಹೊರ ಬರಲು ಹೆದರುತ್ತಿದ್ದರು. ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಚಿರತೆ ಸೆರೆಯಿಂದ ಸ್ಥಳೀಯರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಮಂಗಳವಾರ ಚಿರತೆಯನ್ನು ಗೆಂಡೆಕಟ್ಟೆ ಅರಣ್ಯಕ್ಕೆ ಸ್ಥಳಾಂತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.