ADVERTISEMENT

ಶಾಸಕ ಪ್ರೀತಂ ಸೇರಿ ಮೂವರ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 20:15 IST
Last Updated 5 ಡಿಸೆಂಬರ್ 2019, 20:15 IST
   

ಹಾಸನ: ಜೆಡಿಎಸ್‌ ಕಾರ್ಯಕರ್ತರಿಗೆ ಪ್ರಾಣ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಸೇರಿದಂತೆ ಮೂವರ ವಿರುದ್ಧ ಶ್ರವಣಬೆಳಗೊಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಆರ್‌.ಪೇಟೆ ಉಪ ಚುನಾವಣೆ ಹಿನ್ನಲೆಯಲ್ಲಿ ಹಲವು ಗ್ರಾಮಗಳಲ್ಲಿ ಮತದಾರರಿಗೆ ಹಣ ಹಂಚಿರುವ ವಿಷಯವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುವುದಾಗಿ ಬುಧವಾರ ರಾತ್ರಿ ಶಾಸಕ ಪ್ರೀತಂ ಗೌಡ, ಶ್ರವಣಬೆಳಗೊಳ ಠಾಣೆ ಎಸ್‌ಐ ಪುತ್ರ, ಕ್ವಾಲಿಟಿ ಬಾರ್ ಶರತ್‌ ಹಾಗೂ ಇತರರು ಬೆದರಿಕೆ ಹಾಕಿದ್ದಾರೆ ಎಂದು ಶ್ರವಣಬೆಳಗೊಳದ ಗೌಡರ ಬೀದಿ ನಿವಾಸಿಗಳಾದ ಪ್ರಭಾಕರ್‌ ಮತ್ತು ವಡ್ಡರಹಳ್ಳಿ ಗಣೇಶ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರೀತಂಗೌಡ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT