ಆಸ್ಪತ್ರೆ
ill
ಅರಸೀಕೆರೆ (ಹಾಸನ ಜಿಲ್ಲೆ): ಇಲ್ಲಿನ ಮಾಲೇಕಲ್ಲು ತಿರುಪತಿಯ ಕ್ಷೇತ್ರ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ರಾತ್ರಿ ಊಟ ಮಾಡಿದ್ದ 54 ಮಂದಿ ಜನರು ಅಸ್ವಸ್ಥರಾಗಿದ್ದಾರೆ.
ಜಾತ್ರಾ ಮಹೋತ್ಸವ ನಿಮಿತ್ತ ಇಲ್ಲಿನ ಕಲ್ಯಾಣಿಯಲ್ಲಿ ತೆಪೋತ್ಸವ ನಡೆಯಲಿದೆ. ಈ ನಿಮಿತ್ತ ಭಕ್ತರಿಗೆ ಸ್ಥಳೀಯ ಕಲ್ಯಾಣ ಮಂಟಪದಲ್ಲಿ ಭಾನುವಾರ ರಾತ್ರಿ 9ರ ಸುಮಾರಿಗೆ ಬಿಸಿಬೇಳೆ ಭಾತ್, ಮೊಸರನ್ನ ಹಾಗೂ ಜಿಲೇಬಿ ಊಟ ವ್ಯವಸ್ಥೆ ಮಾಡಲಾಗಿತ್ತು. ಸೇವಿಸಿದ್ದವರಲ್ಲಿ 54 ಮಂದಿಗೆ ಸೋಮವಾರ ಬೆಳಿಗ್ಗೆ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ. ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಸಂತೋಷ್‌ಕುಮಾರ್, ‘ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಯೋಗಾಲಯಕ್ಕೆ ಮಾದರಿ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸ್ಪಷ್ಟವಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.