ADVERTISEMENT

ಬೆಂಗಳೂರಿಗೆ ಕಾಲ್ನಡಿಗೆ ಜಾಥಾ: ಎಚ್‌.ಕೆ. ಕುಮಾರಸ್ವಾಮಿ

ಕಾಡಾನೆ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ: ಎಚ್.ಕೆ.ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 16:48 IST
Last Updated 12 ಜನವರಿ 2022, 16:48 IST
ಎಚ್‌.ಕೆ.ಕುಮಾರಸ್ವಾಮಿ
ಎಚ್‌.ಕೆ.ಕುಮಾರಸ್ವಾಮಿ   

ಹಾಸನ: ‘ಮಲೆನಾಡು ಭಾಗದ ಕಾಡಾನೆ ಸಮಸ್ಯೆ ಹಾಗೂ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ವಿಳಂಬ ವಿರೋಧಿಸಿ ಸಕಲೇಶಪುರದಿಂದ ಬೆಂಗಳೂರಿನವರೆಗೂ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ‌’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಹೇಳಿದರು.

‘ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2019ಕ್ಕೆ ಪೂರ್ಣವಾಗಬೇಕಿತ್ತು. ಗುತ್ತಿಗೆದಾರರ ವಿಳಂಬ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಶೇ 30 ರಷ್ಟು ಕಾಮಗಾರಿ ಮಾತ್ರ ಆಗಿದೆ. ಜನ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಸಂಘ ಸಂಸ್ಥೆಗಳು ಮತ್ತು ರೈತರ ಸಭೆ ನಡೆಸಿ ಜಾಥಾ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಇದು ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಪರ್ಯಾಯವಲ್ಲ ಅಥವಾ ಪಕ್ಷ ಸಂಘಟನೆ ಉದ್ದೇಶಕ್ಕೂ ಅಲ್ಲ’ ಎಂದು ಸ್ಪಷ್ಟಪಡಿಸಿದರು.

‘ಕಾಡಾನೆ ಸಮಸ್ಯೆಯಿಂದ ಮಲೆನಾಡು ಭಾಗದ ಜನ ಹೈರಾಣಾಗಿದ್ದಾರೆ. ಈ ಸಮಸ್ಯೆಯ ಬಗ್ಗೆಯೂ ಸರ್ಕಾರದ ಗಮನ ಸೆಳೆಯಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.