ADVERTISEMENT

ನೋಟಿಸ್ ಕೊಟ್ಟವ ಅವಿವೇಕಿ: ಬಿಜೆಪಿ ವಿರುದ್ಧ ಮುನಿಸಿಕೊಂಡು ಕಣ್ಣೀರಿಟ್ಟ ಎ.ಮಂಜು

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 16:15 IST
Last Updated 30 ನವೆಂಬರ್ 2021, 16:15 IST
ಅರಕಲಗೂಡಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಬೆಂಬಲಿತ ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಸಭೆಯಲ್ಲಿ ಭಾಷಣದ ನಡುವೆ ಕಣ್ಣೀರು ಹಾಕಿದ ಮಾಜಿ ಸಚಿವ ಎ. ಮಂಜು.
ಅರಕಲಗೂಡಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಬೆಂಬಲಿತ ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಸಭೆಯಲ್ಲಿ ಭಾಷಣದ ನಡುವೆ ಕಣ್ಣೀರು ಹಾಕಿದ ಮಾಜಿ ಸಚಿವ ಎ. ಮಂಜು.   

ಅರಕಲಗೂಡು: ‘ಪಕ್ಷ ನೀಡಿದ್ದ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ನನಗೆ ನೋಟಿಸ್ ಕೊಟ್ಟವ ಅವಿವೇಕಿ. ನೋಟಿಸ್ ಕೊಡಲು ಅಧಿಕಾರವೇ ಇಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡಿದಾಗ ಮಾತ್ರ ನನಗೆ ಅಧ್ಯಕ್ಷರು ನೋಟಿಸ್ ಕೊಡಬೇಕು’ ಎಂದು ಬಿಜೆಪಿ ಮುಖಂಡ ಎ.ಮಂಜು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಮಂಗಳವಾರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಸಭೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿ ಕಣ್ಣೀರಿಟ್ಟರು.

ಎ.ಮಂಜು ಅವರ ಮಗ ಡಾ.ಮಂಥರ್ ಗೌಡ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಕೊಡಗು ಕ್ಷೇತ್ರದಿಂದ ಸ್ಪರ್ಧಿಸಿದ್ದಕ್ಕೆ ಬಿಜೆಪಿ ಮಂಜು ಅವರಿಗೆ ಇತ್ತೀಚೆಗೆ ನೋಟಿಸ್ ನೀಡಿತ್ತು.

ADVERTISEMENT

‘ನನ್ನ ಮೇಲೆ ನಂಬಿಕೆ ಇಲ್ಲವೆಂದರೆ ಮಗನ ಪರ ಪ್ರಚಾರ ಮಾಡುತ್ತೇನೆ. ಇರುವ ಒಬ್ಬ ಮಗನನ್ನು ಕಳೆದುಕೊಳ್ಳಲು ಆಗುವುದಿಲ್ಲ. ಬಿಜೆಪಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ. ಸಂಘಟನೆ ಜವಾಬ್ದಾರಿ ಹೊತ್ತಿದ್ದೆ ಅಷ್ಟೇ. ಈ ಷಡ್ಯಂತ್ರದ ಹಿಂದೆ ಯಾರ ಕೈವಾಡ ಇದೆ ಎಂಬ ಬಗ್ಗೆ ಸಂದರ್ಭ ಬಂದಾಗ ಮಾತನಾಡುತ್ತೇನೆ’ ಎಂದರು.

‘ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎನ್ನುವ ಕುರಿತು ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ಅಭಿಪ್ರಾಯ ಪಡೆದು ನಿರ್ಧರಿಸುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.