ಹಾಸನ: ಜಿಲ್ಲೆಯಲ್ಲಿ ಮೂರು ದಿನಗಳಿಂದ ಗುಣಮುಖರ ಸಂಖ್ಯೆ ಹೆಚ್ಚಾಗಿದ್ದು, ಮಂಗಳವಾರ ಒಂದೇ ದಿನ 315
ಕೊರೊನಾ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಗುಣಮುಖರ ಸಂಖ್ಯೆ ಹೆಚ್ಚುತ್ತಿರುವುದು ಕೊಂಚ ನೆಮ್ಮದಿ ಮೂಡಿಸಿದೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 11,138 ತಲುಪಿದೆ.
ಹೊಸದಾಗಿ 217 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 13,959ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಮೃತರ ಸಂಖ್ಯೆ ಹೆಚ್ಚಿರುವುದು (4) ಆತಂಕಕ್ಕೆ ಕಾರಣವಾಗಿದೆ. ಮೃತರ ಸಂಖ್ಯೆ 273 ತಲುಪಿದೆ.
ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಸೀಕೆರೆ ತಾಲ್ಲೂಕಿನ 55 ವರ್ಷದ ಮಹಿಳೆ, ಚನ್ನರಾಯಪಟ್ಟಣ ತಾಲ್ಲೂಕಿನ 60 ವರ್ಷದ ವೃದ್ಧೆ, ಹಾಸನ ತಾಲ್ಲೂಕಿನ 56 ವರ್ಷದ ಮಹಿಳೆ ಹಾಗೂ ಅರಸೀಕೆರೆ ತಾಲ್ಲೂಕಿನ 64 ವರ್ಷದ ವೃದ್ಧ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಕೋವಿಡ್ ನಿಯಮ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಹೊಸದಾಗಿ ಅರಸೀಕೆರೆ 20 , ಚನ್ನರಾಯಪಟ್ಟಣ 64, ಆಲೂರು 2 , ಹಾಸನ 63, ಹೊಳೆನರಸೀಪುರ 11, ಅರಕಲಗೂಡು 14, ಬೇಲೂರು 20, ಸಕಲೇಶಪುರ 23 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.