ADVERTISEMENT

ಕೊಳೆಗೇರಿ ಪ್ರದೇಶದ ನಿವಾಸಿಗಳಿಗೆ ಹಾಲು ವಿತರಿಸಿದ ಶಾಸಕ ಕೆ.ಎಂ. ಶಿವಲಿಂಗೇಗೌಡ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 11:16 IST
Last Updated 4 ಏಪ್ರಿಲ್ 2020, 11:16 IST
ಅರಸೀಕೆರೆ ಬಿ.ಹೆಚ್.ರಸ್ತೆಯಲ್ಲಿರುವ ಸರಸ್ವತಿಪುರಂ ನಿವಾಸಿಗಳಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ತಹಶೀಲ್ದಾರ್ ಸಂತೋಷ್ ಕುಮಾರ್ ಮತ್ತು ನಗರಸಭೆ ಪೌರಾಯುಕ್ತ ಕಾಂತರಾಜ್ ಹಾಲು ವಿತರಣೆ ಮಾಡಿದರು
ಅರಸೀಕೆರೆ ಬಿ.ಹೆಚ್.ರಸ್ತೆಯಲ್ಲಿರುವ ಸರಸ್ವತಿಪುರಂ ನಿವಾಸಿಗಳಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ತಹಶೀಲ್ದಾರ್ ಸಂತೋಷ್ ಕುಮಾರ್ ಮತ್ತು ನಗರಸಭೆ ಪೌರಾಯುಕ್ತ ಕಾಂತರಾಜ್ ಹಾಲು ವಿತರಣೆ ಮಾಡಿದರು   

ಅರಸೀಕೆರೆ: ನಾಗರಿಕರ ಜೀವನ ನಿರ್ವಹಣೆಗೆ ಅಗತ್ಯ ವಸ್ತುಗಳ ಕೊರತೆ ತಲೆದೋರಿದ್ದು, ಬಡವರಿಗೆ ಹಾಗೂ ನಗರ ಪ್ರದೇಶದಲ್ಲಿರುವ ಕೊಳೆಗೇರಿ ಪ್ರದೇಶದ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸಲು ನಿರ್ಧರಿಸಿದೆ. ಶನಿವಾರ ಬೆಳಿಗ್ಗೆ ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರಸ್ವತಿ ಪುರಂ ಕೊಳಗೇರಿ ನಿವಾಸಿಗಳಿಗೆ ಉಚಿತವಾಗಿ ಶಾಸಕ ಕೆ ಎಂ ಶಿವಲಿಂಗೇಗೌಡ ಹಾಲು ವಿತರಿಸಿದರು.

ನಂತರ ಮಾತನಾಡಿದ ಅವರು, ಕೋವಿಡ್ 19 ವೈರಸ್ ನಿಗ್ರಹಕ್ಕೆ ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಎಲ್ಲರೂ ಸಹಕರಿಸಬೇಕು. ಈ ನಿಟ್ಟಿನಲ್ಲಿ ತಾಲ್ಲೂಕಿನ ಜನತೆ ಗುಂಪು ಗುಂಪಾಗಿ ಸೇರದಂತೆ ಒಬ್ಬರಿಗೊಬ್ಬರು ಅರಿವು ಮೂಡಿಸುವ ಕೆಲಸ ಆಗಬೇಕು ಎಂದರು.

ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ಸರ್ಕಾರದ ಆದೇಶದಂತೆ ಇಂದು ಬಡವರಿಗೆ ಅದರಲ್ಲೂ ವಿಶೇಷವಾಗಿ ನಗರದ ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ಹಾಲು ವಿತರಿಸಲಾಗುತ್ತಿದೆ. ಬಡವರಿಗೆ ಅಗತ್ಯ ವಸ್ತುಗಳು ಸಿಗುವಂತೆ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ ಕೋವಿಡ್ 19 ವೈರಸ್ ಬಗ್ಗೆ ಯಾರೂ ಭಯಪಡಬೇಕಿಲ್ಲ ಎಂದರು .

ADVERTISEMENT

ನಗರಸಭೆ ಪೌರಾಯುಕ್ತ ಕಾಂತರಾಜ್, ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.