ADVERTISEMENT

ಸಕಲೇಶಪುರ | ಇಬ್ಬರ ಬಂಧನ; 2 ಕೆ.ಜಿ. ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 7:27 IST
Last Updated 1 ಆಗಸ್ಟ್ 2025, 7:27 IST
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಸಮೀಪ ಗುರುವಾರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಸಮೀಪ ಗುರುವಾರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.   

ಸಕಲೇಶಪುರ: ಗಾಂಜಾ ಮಾರಾಟ ಮಾಡುತ್ತಿದ್ದ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ತಾಲ್ಲೂಕಿನ ಬಾಳ್ಳುಪೇಟೆ –ಜಮ್ನಹಳ್ಳಿ ನಡುವಿನ ರಸ್ತೆ ಬದಿಯಲ್ಲಿ ಬಂಧಿಸಿರುವ ಗ್ರಾಮಾಂತರ ಪೊಲೀಸರು, ₹ 36 ಸಾವಿರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಅಸ್ಸಾಂನ ದರಾಂಗ್ ಜಿಲ್ಲೆಯ ಸಂಶುಲ್‌ ಹಕ್‌ ಹಾಗೂ ಹುರುಮುಜ್‌ ಅಲಿ ಬಂಧಿತ ಆರೋಪಿಗಳು. ಇವರಿಬ್ಬರೂ ವಿರಾಜಪೇಟೆಯ ಚೀಯಂಡಣೆ ಗ್ರಾಮದ ದಯಾ ಅವರ ಕಾಫಿ ತೋಟವೊಂದರಲ್ಲಿ ಕೂಲಿ ಮಾಡುವ ನೆಪದಲ್ಲಿ ಬಂದು ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್‌ ಸುಜೀತಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್‌ ನಾಯ್ಡು, ಡಿವೈಎಸ್ಪಿ ಪ್ರಮೋದ್‌ಕುಮಾರ್ ಜೈನ್‌, ಇನ್‌ಸ್ಪೆಕ್ಟರ್ ನಿರಂಜನ್‌ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆ ಸಬ್‌ ಇನ್‌ಸ್ಪೆಕ್ಟರ್ ಪ್ರಸನ್ನ, ಸಿಬ್ಬಂದಿ ಖಾದರ್‌ ಅಲಿ, ಆದಿತ್ಯ, ರಘು, ಶಶಾಂಕ್, ಶರತ್‌, ಚೇತನ್‌, ಚಾಲಕ ಯೋಗೇಶ್ ಈ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.