ADVERTISEMENT

ಅರಸೀಕೆರೆ: ಸರ್ಕಾರಿ ಆಸ್ಪತ್ರೆಯಲ್ಲಿನ ಜನೌಷಧಿ ಕಳ್ಳತನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2019, 12:54 IST
Last Updated 20 ಅಕ್ಟೋಬರ್ 2019, 12:54 IST
ನಗರದಲ್ಲಿರುವ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕಳ್ಳತನ ನಡೆದಿದೆ ಹಾಗೂ ಜನೌಷಧಿಗಳು ಚೆಲ್ಲಾಪಿಲ್ಲಿಯಾಗಿರುವುದು
ನಗರದಲ್ಲಿರುವ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕಳ್ಳತನ ನಡೆದಿದೆ ಹಾಗೂ ಜನೌಷಧಿಗಳು ಚೆಲ್ಲಾಪಿಲ್ಲಿಯಾಗಿರುವುದು   

ಅರಸೀಕೆರೆ: ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಬಡವರ ಅನುಕೂಲಕ್ಕಾಗಿ ಸಂಗ್ರಹಿಸಿದ್ದ ಜನೌಷಧಿಗಳನ್ನು ಕಳ್ಳತನ ಮಾಡಲಾಗಿದೆ.

ಶನಿವಾರ ರಾತ್ರಿ ಸುಮಾರು ಒಂದೂವರೆ ಗಂಟೆ ವೇಳೆ ನಗರದ ಸರ್ಕಾರಿ ಆಸ್ಪತ್ರೆಗೆ ನುಗ್ಗಿದ ಕಳ್ಳರು ಕಡಿಮೆ ದರದಲ್ಲಿ ಮಾರಾಟ ಮಾಡಲು ಇಟ್ಟಿದ್ದ ಜನೌಷಧಿ ಮಳಿಗೆಯ ಬೀಗವನ್ನು ಮುರಿದು ಕಳ್ಳತನ ಮಾಡಿದ್ದಾರೆ.

ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಬಡವರಿಗಾಗಿ ಇರುವ ಜನೌಷಧಿಗಳನ್ನು ಕಳ್ಳತನ ಮಾಡಿರುವ ಆರೋಪಿಗಳನ್ನು ಪೊಲೀಸರು ಶೀಘ್ರವೇ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.