ADVERTISEMENT

ಗಂಡು,ಹೆಣ್ಣಿಗೆ ಸಮಾನ ಶಿಕ್ಷಣ ನೀಡಿ: ಜಿಲ್ಲಾಧಿಕಾರಿ ಆರ್.ಗಿರೀಶ್‌

ಮಹಿಳಾ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್‌ ಅಭಿಮತ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 14:46 IST
Last Updated 8 ಮಾರ್ಚ್ 2021, 14:46 IST
ಹಾಸನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರು ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ಯುವತಿಯರನ್ನು ಸನ್ಮಾನಿಸಲಾಯಿತು.
ಹಾಸನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರು ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ಯುವತಿಯರನ್ನು ಸನ್ಮಾನಿಸಲಾಯಿತು.   

ಹಾಸನ: ಮಹಿಳೆಯರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಪ್ರಬಲರಾದರೆ ಮಾತ್ರ ಮಹಿಳೆಯರ ಅಭಿವೃದ್ದಿ ಸಾಧ್ಯ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅಭಿಪ್ರಾಯಪಟ್ಟರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಾಸನ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಆಶ್ರಯದಲ್ಲಿ ಏರ್ಪಡಿಸಿದ ವಿಶ್ವಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಂಡು ಮತ್ತು ಹೆಣ್ಣು ಎಂಬ ತಾರತಮ್ಯವಿಲ್ಲದೆ ಸಮಾನ ಶಿಕ್ಷಣ ನೀಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು. ಸರ್ಕಾರದ ವಿವಿಧ ಯೋಜನೆಗಳಡಿ ಬರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸಬಲರಾಗಬೇಕು ಎಂದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ. ಪರಮೇಶ್, ಸಾಮಾಜಿಕ, ಆರ್ಥಿಕ ಹಾಗೂ ವೈಜ್ಞಾನಿಕಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿಕಾರ್ಯನಿರ್ವಹಿಸುತಿದ್ದು, ಕೆಲವು ಕ್ಷೇತ್ರಗಳಲ್ಲಿ ಪುರುಷರಿಗಿಂತ ಉತ್ತಮ ಸಾಮರ್ಥ್ಯ
ಸಾಬಿತು ಮಾಡಿದ್ದಾರೆ ಎಂದು ನುಡಿದರು.

ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿಯೂ ಮುಕ್ತ ಅವಕಾಶವಿದೆ. ಆದರೆ ಕೆಲ ಕಟ್ಟುಪಾಡುಗಳಿಂದ ಕುಟುಂಬದವರು ಅವಕಾಶ ವಂಚಿತರನ್ನಾಗಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಮಾತನಾಡಿ, ಮಹಿಳೆಯರು ಪ್ರಗತಿಯಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ. ಇತ್ತೀಚಿನ ದಿನಗಳಲ್ಲಿ ಅಪರಾಧಪ್ರಕರಣಗಳು ಹೆಚ್ಚುತ್ತಿದ್ದು, ಮಕ್ಕಳಿಗೆ ನೈತಿಕ ಮೌಲ್ಯ ಹಾಗೂ ಉತ್ತಮ ವ್ಯಕ್ತಿತ್ವನೀಡುವಲ್ಲಿ ಪೋಷಕರು ಹೆಚ್ಚಿನ ಪಾತ್ರ ವಹಿಸಬೇಕು. ಬಾಲ್ಯ ವಿವಾಹ, ವರದಕ್ಷಿಣೆ, ಕೌಟುಂಬಿಕ ದೌರ್ಜನ್ಯ ತಡೆಗಟ್ಟಲು ಮುಂದಾಗಬೇಕು ಎಂದು ಹೇಳಿದರು.

ಇದೇ ವೇಳೆ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರನ್ನುಜಿಲ್ಲಾಧಿಕಾರಿ ಆರ್. ಗಿರೀಶ್ ಸನ್ಮಾನಿಸಿ, ಪ್ರಶಸ್ತಿ ವಿತರಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಸಿಇಒ ಬಿ.ಎ ಪರಮೇಶ್ ಅವರು ಸ್ತ್ರೀ ಶಕ್ತಿ ಸಂಘಗಳ ವತಿಯಿಂದ ಆಯೋಜಿಸಿದ್ದ ಜಿಲ್ಲಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ರೇವತಿ ಸುಧಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದಿ ಇಲಾಖೆ ಪ್ರಭಾರಿ ಉಪ ನಿರ್ದೇಶಕ ದಿಲೀಪ್, ಕನ್ನಡ ಮತ್ತುಸಂಸೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್, ಕನ್ನಡ ಸಾಹಿತ್ಯ ಪರಿಷತ್ಜಿಲ್ಲಾ ಘಟಕದ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಹಿರಿಯ ನಾಗರೀಕರ ಹಾಗೂವಿಕಲಚೇತನರ ಕಲ್ಯಾಣಧಿಕಾರಿ ಮಲ್ಲೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.