ಶ್ರವಣಬೆಳಗೊಳ: ಶಿಕ್ಷಣದ ಜೊತೆಗೆ ಗೈಡ್‌ಲೈನ್ ವಿದ್ಯಾಸಂಸ್ಥೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕಲೆ ಸಂಸ್ಕೃತಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿರುವುದು ಸಂತಸ ತಂದಿದೆ ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಗೊಮ್ಮಟ ನಗರದಲ್ಲಿರುವ ಗೈಡ್ ಲೈನ್ ಅಂತರರಾಷ್ಟ್ರೀಯ ಶಾಲಾ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಈ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದು, ಜಿಲ್ಲೆಯಲ್ಲಿ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಆಡಳಿತ ಮಂಡಳಿಯ ಸದಸ್ಯರನ್ನು ಶ್ಲಾಘಿಸಿದರು.
10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.