ADVERTISEMENT

ಮತ ಎಣಿಕೆ: ಗೊಂದಲಕ್ಕೆ ಅವಕಾಶ ನೀಡಬೇಡಿ

ಕೇಂದ್ರಕ್ಕೆ ವೀಕ್ಷಕರ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 22 ಮೇ 2019, 15:24 IST
Last Updated 22 ಮೇ 2019, 15:24 IST
ಚುನಾವಣಾ ಆಯೋಗದ ವೀಕ್ಷಕರಾದ ಶಶಿಭೂಷಣ್‌ ಹಾಗೂ ಮಂಜಿತ್‌ಸಿಂಗ್‌ ಬ್ರಾರ್‌ ಅವರು ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಚುನಾವಣಾ ಆಯೋಗದ ವೀಕ್ಷಕರಾದ ಶಶಿಭೂಷಣ್‌ ಹಾಗೂ ಮಂಜಿತ್‌ಸಿಂಗ್‌ ಬ್ರಾರ್‌ ಅವರು ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.   

ಹಾಸನ: ಲೋಕಸಭಾ ಕ್ಷೇತ್ರದ ಮತ ಎಣಿಕೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ವೀಕ್ಷಕರಾದ ಶಶಿಭೂಷಣ್ ಕುಮಾರ್ ಹಾಗೂ ಮಂಜಿತ್ ಸಿಂಗ್ ಬ್ರಾರ್ ಅವರು ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ, ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದರು.

ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ, ಸ್ಟ್ರಾಂಗ್ ರೂಂ, ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆಗೆ ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

ಬಳಿಕ ಮಾತನಾಡಿದ ಶಶಿಭೂಷಣ್‌, ಮತ ಎಣಿಕೆಗೆ ಈಗಾಗಲೇ ಹಲವಾರು ರೀತಿಯ ಕ್ರಮಕೈಗೊಂಡಿದ್ದು, ಯಾವುದೇ ಗೊಂದಲ ಇಲ್ಲದಂತೆ ಎಚ್ಚರ ವಹಿಸಬೇಕು. ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಮತ ಎಣಿಕೆ ಕೇಂದ್ರಗಳು ಹಾಗೂ ಸ್ಟ್ರಾಂಗ್ ರೂಂಗಳಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸಾಮಾನ್ಯ ವೀಕ್ಷಕರುಗಳಿಗೆ ಸಿದ್ಧತೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ವಿವರಿಸಿದರು.

ADVERTISEMENT

ಉಪವಿಭಾಗಾಧಿಕಾರಿಗಳಾದ ಎಚ್.ಎಲ್.ನಾಗರಾಜ್, ಕವಿತಾ ರಾಜಾರಾಂ, ಡಾ. ಸುಧೀರ್, ಡಾ. ಸುನಿಲ್‌ ಹಾಜರಿದ್ದರು.

ಮತ ಎಣಿಕಾ ಕೇಂದ್ರದ ನೆಲ ಮಹಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಕೇಂದ್ರ ಹಾಗೂ ತುರ್ತು ಚಿಕಿತ್ಸಾ ಘಟಕ ತೆರೆಯಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಹಾಗೂ ತಾಲ್ಲೂಕು ವೈದ್ಯಾಧಿಕಾರಿ ವಿಜಯ್ ನೇತೃತ್ವ ವಹಿಸಿದ್ದಾರೆ. ಈ ಘಟಕದಲ್ಲಿ ಎಲ್ಲಾ ರೀತಿಯ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ಔಷಧಿಗಳನ್ನು ದಾಸ್ತಾನು ಇರಿಸಲಾಗಿದೆ. ಅಲ್ಲದೇ ಎರಡು ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.