ADVERTISEMENT

ಹೊಳೆನರಸೀಪುರ | ಸರ್ಕಾರಿ ಗೃಹ ವಿಜ್ಞಾನ ಕಾಲೇಜು: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 6 ಮೇ 2025, 13:22 IST
Last Updated 6 ಮೇ 2025, 13:22 IST
ಹೊಳೆನರಸೀಪುರ: ಪಟ್ಟಣದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿ
ಹೊಳೆನರಸೀಪುರ: ಪಟ್ಟಣದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿ   

ಹೊಳೆನರಸೀಪುರ: ಪಟ್ಟಣದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಸಿ.ಎ ವ್ಯಾಸಂಗಕ್ಕೆ ಅವಕಾಶ ಇದೆ. ಎಂ.ಕಾಂ ಶಿಕ್ಷಣವೂ ಇದೆ. ಗೃಹ ವಿಜ್ಞಾನ ವಿಭಾಗ ಹೋಟೆಲ್ ಮ್ಯಾನೇಜ್‌ಮೆಂಟ್, ಇಂಟೀರಿಯರ್ ಡೆಕೊರೇಷನ್, ಕರಕುಶಲ ವಸ್ತುಗಳ ತರಬೇತಿಯನ್ನು ಒಳಗೊಂಡಿದೆ.

‘ಕಳೆದ ಸಾಲಿನಲ್ಲಿ ಶೇ 100ರಷ್ಟು ಫಲಿತಾಂಶ ಲಭಿಸಿದ್ದು, ಶೇ 40ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ. ಪಠ್ಯೇತರ ಚಟುವಟಿಕೆಗಳು, ನುರಿತ ತರಬೇತುದಾರರಿಂದ ತರಬೇತಿಯಿದೆ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಬೇಕಾದ ಎಲ್ಲ ಅಗತ್ಯ ಮೂಲಸೌಲಭ್ಯಗಳಿವೆ’ ಎಂದು ಪ್ರಾಂಶುಪಾಲೆ ಆಶಾಜ್ಯೋತಿ, ಸೈಕಾಲಜಿ ವಿಭಾಗದ ಮುಖ್ಯಸ್ಥ ಕೃಷ್ಣಮೂರ್ತಿ ತಿಳಿಸಿದ್ದಾರೆ.

ADVERTISEMENT

‘ವಿದ್ಯಾರ್ಥಿನಿಯರು ಪಾವತಿಸುವ ಕಾಲೇಜು ಶುಲ್ಕವೂ ವಿದ್ಯಾರ್ಥಿವೇತನ ಯೋಜನೆಯಿಂದ ಮರಳಿ ಪಡೆಯಬಹುದು. ಕಾಲೇಜು ಆವರಣದಲ್ಲಿ ಉಚಿತ ಹಾಸ್ಟೆಲ್ ಸೌಲಭ್ಯವೂ ಇದ್ದು ಮೊದಲು ಬಂದವರಿಗೆ ಆದ್ಯತೆ ಮೇಲೆ ಸೌಲಭ್ಯ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಮೊ.ಸಂ. 9482394489, 9036705997 ಸಂಪರ್ಕಿಸಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.