ADVERTISEMENT

ಜಾವಗಲ್: ಮಳೆಗೆ ಸೋರುತ್ತಿದೆ ಸರ್ಕಾರಿ ಶಾಲಾ ಕಟ್ಟಡ

​ಪ್ರಜಾವಾಣಿ ವಾರ್ತೆ
Published 30 ಮೇ 2023, 14:39 IST
Last Updated 30 ಮೇ 2023, 14:39 IST
ಜಾವಗಲ್ ಹೋಬಳಿಯ ನೇರ್ಲಿಗೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಕಟ್ಟಡದ ಮೇಲ್ಚಾವಣಿ ಶಿಥಿಲ ಗೊಂಡಿರುವುದು
ಜಾವಗಲ್ ಹೋಬಳಿಯ ನೇರ್ಲಿಗೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಕಟ್ಟಡದ ಮೇಲ್ಚಾವಣಿ ಶಿಥಿಲ ಗೊಂಡಿರುವುದು   

ಜಾವಗಲ್: ಹೋಬಳಿಯ ನೇರ್ಲಿಗೆ ಗ್ರಾಮದಲ್ಲಿ ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಪ್ರೌಢಶಾಲಾ ಕಟ್ಟಡದ ಮೇಲ್ಚಾವಣಿ ಶಿಥಿಲಗೊಂಡಿದ್ದು ವಿದ್ಯಾರ್ಥಿಗಳು ಆತಂಕದೊಂದಿಗೆ ವ್ಯಾಸಂಗ ಮಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳನ್ನು ಒಳಗೊಂಡಂತೆ ಎಲ್ಲಾ ವರ್ಗದ ಮಕ್ಕಳಿಗೂ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣ ಒದಗಿಸುವ ಉದ್ದೇಶದೊಂದಿಗೆ ನಿರ್ಮಿಸಲಾಗಿದ್ದ ಶಾಲೆ ಈ ಕಟ್ಟಡದ ಮೇಲ್ಚಾವಣಿಯು ಬಿರುಕು ಬಿಟ್ಟಿರುವ ಪರಿಣಾಮ ಮಳೆ ನೀರು ಕೊಠಡಿಯಲ್ಲಿ ಸೋರುತ್ತಿದ್ದು, ಕಟ್ಟಡವು ಶಿಥಿಲಗೊಂಡಿರುವ ಕಾರಣ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

ಈ ಪ್ರೌಢಶಾಲೆಯಲ್ಲಿ ಒಟ್ಟು ಮೂರು ಕೊಠಡಿಗಳಿದ್ದು ಸುಮಾರು 60 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ADVERTISEMENT

ಈಗಾಗಲೇ ಮಳೆಗಾಲ ಆರಂಭವಾಗಿದ್ದು ಕಟ್ಟಡದ ಒಳಗೆ ನೀರು ಬೀಳುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಂಡು ಕಟ್ಟಡವನ್ನು ದುರಸ್ತಿಗೊಳಿಸಿ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.