ADVERTISEMENT

ಹಾಸನ: ಜುಲೈ 19ರಂದು ಹಸಿರು ಸಿರಿ ಸಸ್ಯೋತ್ಸವ

ಟೈಮ್ಸ್ ಇಂಟರ್‌ ನ್ಯಾಷನಲ್ ಶಾಲೆ- ರೋಟರಿ ಕ್ಲಬ್ ಆಫ್ ಹಾಸನ ರಾಯಲ್ ಸಹಯೋಗ

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 4:46 IST
Last Updated 18 ಜುಲೈ 2025, 4:46 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಹಾಸನ: ನಗರದ ಟೈಮ್ಸ್ ಇಂಟರ್‌ನ್ಯಾಷನಲ್‌ ಶಾಲೆ ಹಾಗೂ ರೋಟರಿ ಕ್ಲಬ್ ಆಫ್ ಹಾಸನ್ ರಾಯಲ್ ಸಹಯೋಗದಲ್ಲಿ ಇದೇ 19 ರಂದು ‘ಹಸಿರ ಸಿರಿ ಸಸ್ಯೋತ್ಸವ’- 2025 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟೈಮ್ಸ್ ಗಂಗಾಧರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗಿಡ ವಿತರಿಸುವ ಹಾಗೂ ಘೋಷಣೆ ಮಾಡುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಬಾರಿಯೂ ಸುಮಾರು 10 ಸಾವಿರ ಗಿಡಗಳನ್ನು ವಿತರಣೆ ಮಾಡಲಾಗುತ್ತಿದ್ದು, ಶಾಲೆಯ ಪ್ರತಿ ವಿದ್ಯಾರ್ಥಿಗೂ 2–3 ಸಸಿಗಳನ್ನು ನೀಡಿ ತಮ್ಮ ಮನೆಯ ಆವರಣದಲ್ಲಿ ನೆಡುವಂತೆ ತಿಳಿಸಲಾಗಿದೆ ಎಂದರು.

ADVERTISEMENT

ವಿದ್ಯಾರ್ಥಿಗಳಿಗೆ ಸಸಿ ನೀಡುವ ಜೊತೆಗೆ ಪೋಷಣೆ ಮಾಡುವಂತೆ ತಿಳಿಸಲಾಗಿದೆ. ಪ್ರತಿ ವರ್ಷವೂ ಉತ್ತಮವಾಗಿ ಸಸಿಯನ್ನು ಪೋಷಣೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವ ಹಾಗೂ ಪ್ರೋತ್ಸಾಹಿಸುವ ಕೆಲಸವನ್ನು ಶಾಲೆಯ ಆಡಳಿತ ಮಂಡಳಿಯಿಂದ ಮಾಡಲಾಗುತ್ತಿದೆ. ಮಕ್ಕಳಿಗೆ ಪ್ರಕೃತಿಯ ಜೊತೆಗೆ ಒಡನಾಟ ಬೆಳೆಯುವಂತೆ ಮಾಡುವುದೇ ನಮ್ಮ ಮುಖ್ಯ ಉದ್ದೇಶ ಎಂದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಆಫ್ ಹಾಸನ್ ರಾಯಲ್‌ನ ಡಿಸ್ಟ್ರಿಕ್ಟ್ ಗವರ್ನರ್‌ ಕೆ. ಪಾಲಾಕ್ಷ ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ಸಹಾಯಕ ಗವರ್ನರ್ ಮಂಜುನಾಥ್, ಜೋನಲ್ ಲೆಫ್ಟಿನೆಂಟ್ ಮಮತ ಪಾಟೀಲ್ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸುಧೀರ್, ಪಿ. ರವಿ ಕುಮಾರ್, ದಿಲೀಪ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.