ADVERTISEMENT

ಗುಂಡಿ ಬಿದ್ದ ರಸ್ತೆಯಲ್ಲಿ ಸಸಿ ನೆಟ್ಟು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 15:58 IST
Last Updated 12 ನವೆಂಬರ್ 2019, 15:58 IST
ಹಾಸನದ ಕುವೆಂಪುನಗರದ ಗುಂಡಿ ಬಿದ್ದ ರಸ್ತೆಯಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಸಿ ನೆಟ್ಟು ಪ್ರತಿಭಟನೆ ನಡೆಸಿದರು.
ಹಾಸನದ ಕುವೆಂಪುನಗರದ ಗುಂಡಿ ಬಿದ್ದ ರಸ್ತೆಯಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಸಿ ನೆಟ್ಟು ಪ್ರತಿಭಟನೆ ನಡೆಸಿದರು.   

ಹಾಸನ: ಕುವೆಂಪುನಗರದ ಗುಂಡಿ ಬಿದ್ದ ರಸ್ತೆಯಲ್ಲಿ ಸಸಿಗಳನ್ನು ನೆಟ್ಟು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಬಹುತೇಕ ರಸ್ತೆಗಳು ಅಭಿವೃದ್ಧಿ ಕಾಣದೆ ಗುಂಡಿಮಯವಾಗಿವೆ. ವಾಹನ ಸವಾರರು ಸಂಚರಿಸಲು ಆಗದಷ್ಟು ರಸ್ತೆಗಳು ಹದಗೆಟ್ಟಿವೆ. ವಾಹನ ಸವಾರರು ಬಿದ್ದು ಗಾಯಗೊಂಡಿದ್ದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಳೆ ಬಿಡುವು ನೀಡಿರುವುದರಿಂದ ತಕ್ಷಣ ಗುಂಡಿ ಮುಚ್ಚುವ ಕಾರ್ಯ ಆರಂಭಿಸಬೇಕು. ಹಲವು ಕಡೆ ವಾಹನ ಇರಲಿ, ನಡೆದುಕೊಂಡು ಹೋಗಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಂದರೆ ಆಯಿತು. ಬಸ್‌, ಲಾರಿ ಸಾಲುಗಟ್ಟಿ ನಿಂತಿದ್ದವು.

ADVERTISEMENT

ಸಂಘದ ಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು, ಕಾರ್ಯಕರ್ತರರಾದ ಗೌಸ್ ಮಹಮ್ಮದ್ , ಹರೀಶ್ ಗೌಡ, ಇಫ್ರಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.